ನವದೆಹಲಿ:ಕಳೆದೆರಡು ಪಂದ್ಯಗಳಿಂದ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಸಂಜು ಸಾಮ್ಸನ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಇವರ ಆಟಕ್ಕೆ ಮನಸೋತಿರುವ ಸಂಸದ ಹಾಗೂ ಕಾಂಗ್ರೆಸ್ ನಾಯಕ ಶಿಶಿ ತರೂರ್ ಸಾಮ್ಸನ್ ಮುಂದಿನ ಧೋನಿ ಎಂದು ಟ್ವೀಟ್ ಮಾಡಿದ್ದಾರೆ.
ಭಾನುವಾರದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಬೌಲರ್ಗಳನ್ನು ಮನಬಂದಂತೆ ದಂಡಿಸಿದ್ದ ಸಾಮ್ಸನ್ ಕೇವಲ 42 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್ಗಳ ಸಹಿತ 85 ರನ್ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧವೂ ಕೇವಲ 32 ಎಸೆತಗಳಲ್ಲಿ 74 ರನ್ ಸಿಡಿಸಿದ್ದರು.
ಪಂಜಾಬ್ ವಿರುದ್ಧ ಗೆಲುವು ಸಾಧಿಸುತ್ತಿದ್ದಂತೆ ಶಶಿ ತರೂರ್ ಸಾಮ್ಸನ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇವರು ಮುಂದಿನ ಧೋನಿ ಎಂದು ಹೇಳಿದ್ದಾರೆ. ಆದರೆ, ಇದಕ್ಕೇ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಕ್ರಿಕೆಟಿಗ ಗಂಭೀರ್ ಸಾಮ್ಸನ್ ಮುಂದಿನ ಯಾರೋ ಆಗುವುದು ಬೇಡ, ಅವರು ಭಾರತೀಯ ಕ್ರಿಕೆಟ್ನಲ್ಲಿ ಸಂಜು ಸಾಮ್ಸನ್ ಆಗಿರಲಿ ಎಂದು ಅವರು ತಿಳಿಸಿದ್ದಾರೆ.