ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಅಗತ್ಯವಿರುವ ಚಿಕಿತ್ಸಾ ಯೋಜನೆ ಕುರಿತು ಚರ್ಚಿಸಲು ವೈದ್ಯಕೀಯ ಮಂಡಳಿ ಸೋಮವಾರ ಸಭೆ ಸೇರಲಿದೆ ಎಂದು ವುಡ್ಲ್ಯಾಂಡ್ಸ್ ಆಸ್ಪತ್ರೆ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಿದೆ.
"ಗಂಗೂಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ನಿರಂತರ ನಿಗಾ ವಹಿಸಿದ್ದಾರೆ. ಸಮಯಕ್ಕೆ ತಕ್ಕ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಮುಂದಿನ ಚಿಕಿತ್ಸಾ ಯೋಜನೆ ಕುರಿತು ಸೋಮವಾರ ಆಸ್ಪತ್ರೆಯ ವೈದ್ಯಕೀಯ ಮಂಡಳಿಯಲ್ಲಿ ತೀರ್ಮಾನ ಮಾಡುತ್ತೇವೆ " ಎಂದು ಹೇಳಿಕೆಯಲ್ಲಿ ಆಸ್ಪತ್ರೆ ತಿಳಿಸಿದೆ.