ಮುಂಬೈ: ಭಾರತ ತಂಡದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಒಬ್ಬ ಕ್ಲಾಸ್ ಪ್ಲೇಯರ್ ಆಗಿದ್ದು, ಪ್ರಸ್ತುತ ಆತ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಆಡದಿರುವುದು ದುರದೃಷ್ಟಕರ ಎಂದು ಮಾಜಿ ಕ್ರಿಕೆಟಿಗರ ಗೌತಮ್ ಗಂಭೀರ್ ತಿಳಿಸಿದ್ದಾರೆ.
ಕಳೆದ ಆಸ್ಟ್ರೇಲಿಯಾ ಪ್ರವಾಸದ ವೇಳೆ ರವಿಚಂದ್ರನ್ ಅಶ್ವಿನ್ ಗಾಯಗೊಂಡು ನಾಲ್ಕನೇ ಟೆಸ್ಟ್ನಿಂದ ಹೊರಬೀಳುವ ಮುನ್ನ ಮೂರು ಪಂದ್ಯಗಳಿಂದ 12 ವಿಕೆಟ್ ಪಡೆದಿದ್ದರು. ಅಲ್ಲದೇ ಸಿಡ್ನಿ ಟೆಸ್ಟ್ನಲ್ಲಿ ಹನುಮ ವಿಹಾರಿ ಜೊತೆ 43 ಓವರ್ಗಳ ಕಾಲ ಬ್ಯಾಟಿಂಗ್ ನಡೆಸಿ ಭಾರತ ತಂಡವನ್ನು ಸೋಲಿನಿಂದ ಪಾರು ಮಾಡಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ತಮ್ಮ ಅದ್ಭುತ ಪ್ರದರ್ಶನ ಮುಂದುವರಿಸಿದ್ದಾರೆ. ಅಶ್ವಿನ್ ಮೊದಲ ಟೆಸ್ಟ್ ಪಂದ್ಯದಲ್ಲಿ 9 ಹಾಗೂ ಎರಡನೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್ ಜೊತೆಗೆ ಶತಕ ಸಿಡಿಸಿ ಬ್ಯಾಟಿಂಗ್ನಲ್ಲೂ ಮಿಂಚುವ ಮೂಲಕ ಭಾರತ ತಂಡ 317 ರನ್ಗಳ ಜಯ ಸಾಧಿಸಲು ನೆರವಾಗಿದ್ದರು.
ಐಪಿಎಲ್ ಮತ್ತು ಸುದೀರ್ಘ ಮಾದರಿಯು ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಅಶ್ವಿನ್ ಅವರನ್ನು ಸೀಮಿತ ಓವರ್ ತಂಡಕ್ಕೆ ಆಯ್ಕೆ ಮಾಡದಿರುವುದಕ್ಕೆ ಭಾರತದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಬೇಸರ ವ್ಯಕ್ತಪಡಿಸಿದ್ದಾರೆ.