ನವದೆಹಲಿ:ವಿಶ್ವ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ಗೆ ಕೋವಿಡ್-19 ಸೋಂಕು ತಗುಲಿದ್ದು, ಮಾಜಿ ವಿಂಡೀಸ್ ಆಟಗಾರ ವಿವಿಯನ್ ರಿಚರ್ಡ್ಸ್ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಸಚಿನ್ ಬೇಗ ಗುಣಮುಖರಾಗಲೆಂದು ಶುಭ ಹಾರೈಸುತ್ತೇನೆ. ಅವರು ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲಿ. ನಿಮಗೆ ವಿಶ್ವಾದ್ಯಂತ ಶತಕೋಟಿ ಅಭಿಮಾನಿಗಳ ಪ್ರಾರ್ಥನೆ ಇದೆ' ಎಂದು ಬರೆದಿದ್ದಾರೆ.
ಇದನ್ನೂ ಓದಿ : ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ಗೆ ಕೊರೊನಾ ಸೋಂಕು ದೃಢ
ನನಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದೆ. ಟೆಸ್ಟ್ ರಿಪೋರ್ಟ್ನಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಹೋಂ ಕ್ವಾರಂಟೈನ್ ಆಗಿದ್ದೇನೆ. ವೈದ್ಯರು ಸೂಚಿಸಿದ ಎಲ್ಲ ಸೂಚನೆಗಳನ್ನು ಅನುಸರಿಸುತ್ತಿದ್ದೇನೆ. ಕೊರೋನಾ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯ ಸಮುದಾಯಕ್ಕೂ, ದೇಶದ ನನ್ನೆಲ್ಲಾ ಅಭಿಮಾನಿಗಳಿಗೂ ಕೃತಜ್ಞನಾಗಿದ್ದೇನೆ ಎಂದು ತೆಂಡೂಲ್ಕರ್ ನಿನ್ನೆ ಟ್ವೀಟ್ ಮಾಡಿದ್ದರು.
ಉಳಿದಂತೆ ಮನೆಯ ಸದಸ್ಯರು ಕೂಡ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಅವರೆಲ್ಲರ ವರದಿ ನೆಗೆಟಿವ್ ಇದೆ ಎಂದು ಅವರು ತಿಳಿಸಿದ್ದರು.