ಅಹ್ಮದಾಬಾದ್: ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನ್ನಿಂಗ್ಸ್ ಮತ್ತು 25 ರನ್ಗಳಿಂದ ಗೆದ್ದು ಬೀಗಿದೆ. ಆದರೆ ಈ ಪಂದ್ಯದಲ್ಲಿ ಮುನ್ನಡೆ ಪಡೆದುಕೊಳ್ಳುವ ಅವಕಾಶ ನಮಗೆ ಸಿಕ್ಕಿತ್ತು, ಅದನ್ನು ಉಪಯೋಗಿಸಿಕೊಳ್ಳಲು ವಿಫಲರಾದೆವು ಎಂದು ಇಂಗ್ಲೆಂಡ್ ನಾಯಕ ಜೋ ರೂಟ್ ಹೇಳಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ 205 ರನ್ಗಳಿಗೆ ಆಲೌಟ್ ಆಗಿದ್ದ ಇಂಗ್ಲೆಂಡ್, ಭಾರತ ತಂಡವನ್ನು 121 ರನ್ಗಳಾಗುವಷ್ಟರಲ್ಲಿ ಪ್ರಮುಖ ಬ್ಯಾಟ್ಸ್ಮನ್ಗಳ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ ಈ ಅವಕಾಶವನ್ನು ರಿಷಭ್ ಪಂತ್ (101), ವಾಷಿಂಗ್ಟನ್ ಸುಂದರ್ (96) ಮತ್ತು ಅಕ್ಷರ್ ಪಟೇಲ್ (43) ಇಂಗ್ಲೆಂಡ್ ಕೈಯಿಂದ ಕಸಿದುಕೊಂಡರು. ಪರಿಣಾಮ ಭಾರತ 365 ರನ್ ಗಳಿಸಿತು.