ಮುಂಬೈ: ಭಾರತದ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಬುಧವಾರ 33 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಪ್ರಸ್ತುತ ಕ್ರಿಕೆಟ್ ಜಗತ್ತಿನಲ್ಲಿ ಸ್ಫೋಟಕ ಆರಂಭಿಕನಾಗಿರುವ ರೋಹಿತ್ ಶರ್ಮಾ ನಾಗ್ಪುರದ ಬನ್ಸೋದ್ನಲ್ಲಿ1987ರಲ್ಲಿ ಜನಿಸಿದ್ದರು. 2007ರಲ್ಲಿ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕಾಲಿಟ್ಟ 13 ವರ್ಷಗಳ ಕ್ರಿಕೆಟ್ ಜೀವನ ಮುಗಿಸಿದ್ದಾರೆ. ಪ್ರಸ್ತುತ ಮೂರು ವಿಭಾಗದಲ್ಲೂ ಅತ್ಯುತ್ತಮ ಬ್ಯಾಟ್ಸ್ಮನ್ ಆಗಿರುವ ಅವರು ಇಂದು 33ನೇ ಜನ್ಮದಿನವನ್ನಾಚರಿಸಿಕೊಳ್ಳುತ್ತಿದ್ದಾರೆ.
2007ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ರೋಹಿತ್ ಶರ್ಮ, ಇಲ್ಲಿಯವರೆಗೆ 32 ಟೆಸ್ಟ್ ಪಂದ್ಯಗಳಲ್ಲಿ 2141 ರನ್, 224 ಏಕದಿನ ಪಂದ್ಯಗಳಲ್ಲಿ 9115ರನ್ ಹಾಗೂ 108 ಪಂದ್ಯಗಳಲ್ಲಿ 2773 ರನ್ಗಳಿಸಿದ್ದಾರೆ.
ಐಪಿಎಲ್ನಲ್ಲಿ ಯಶಸ್ವಿ ನಾಯಕನಾಗಿರುವ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡಕ್ಕೆ 4 ಬಾರಿ ಟ್ರೋಫಿ ಗೆದ್ದುಕೊಟ್ಟಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ 264 ರನ್ ಸಿಡಿಸಿರುವ ರೋಹಿತ್ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಗರಿಷ್ಠ ರನ್ ಸಿಡಿಸಿರುವ ಹಾಗೂ 3 ದ್ವಿಶತಕ ದಾಖಲಿಸಿರುವ ವಿಶ್ವದ ಏಕೈಕ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಇದಲ್ಲದೆ ಮೂರು ವಿಭಾಗದ ಕ್ರಿಕೆಟ್ನಲ್ಲಿ 4 ಶತಕ ಸಿಡಿಸಿರುವ ವಿಶ್ವದ ಏಕೈಕ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.