ಮುಂಬೈ: ಮಾರ್ಚ್ 12ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ.
15 ಆಟಗಾರರ ತಂಡವನ್ನ ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರದ ಕನ್ನಡಿಗ ಮಯಾಂಕ್ ಅಗರ್ವಾಲ್ರನ್ನ ತಂಡದಿಂದ ಕೈ ಬಿಡಲಾಗಿದೆ. ಗಾಯದ ಕಾರಣದಿಂದ ಕಿವೀಸ್ ಸರಣಿಗೆ ಅಲಭ್ಯರಾಗಿದ್ದ ಶಿಖರ್ ಧವನ್ ಮತ್ತು ಆಲ್ರೌಂಡ್ ಆಟಗಾರ ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಲ್ಲಿ ಗಾಯಗೊಂಡಿದ್ದ ರೋಹಿತ್ ಶರ್ಮಾ ತಂಡದಿಂದ ಹೊರಗುಳಿದಿದ್ದು, ಯುವ ಆಟಗಾರ ಪೃಥ್ವಿ ಶಾ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಮಾರ್ಚ್ 12ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ. ಮೊದಲ ಪಂದ್ಯ ಧರ್ಮಶಾಲಾ, ತದ ನಂತರ ಮಾರ್ಚ್ 12ರಂದು ಲಖನೌ ಹಾಗೂ ಕೊನೆಯ ಏಕದಿನ ಪಂದ್ಯ ಮಾರ್ಚ್ 18ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ.
15 ಆಟಗಾರರ ಭಾರತ ತಂಡ:ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಪೃಥ್ವಿ ಶಾ, ಕೆ ಎಲ್ ರಾಹುಲ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ನವದೀಪ್ ಸೈನಿ, ಕುಲದೀಪ್ ಯಾದವ್, ಶುಬ್ಮನ್ ಗಿಲ್.