ಪಾರ್ಲ್(ದಕ್ಷಿಣ ಆಫ್ರಿಕಾ):ದಕ್ಷಿಣ ಆಫ್ರಿಕಾ ತಂಡದ ವೇಗಿ ಹಾರ್ಡಸ್ ವಿಲ್ಜೋಯೆನ್ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಯಾಕಂದರೆ, ಅವನು ನನ್ನ ತಂಗಿಯ ಜೊತೆ ಮಲಗಿದ್ದಾನೆ ಎಂದು ದಕ್ಷಿಣ ಆಫ್ರಿಕಾ ತಂಡದ ಆಟಗಾರ ಫಾಫ್ ಡು ಪ್ಲೆಸಿಸ್ ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಮಜಾನ್ಸಿ ಸೂಪರ್ ಲೀಗ್ನಲ್ಲಿ ಇಂದು ಪಾರ್ಲ್ ರಾಕ್ಸ್ ಮತ್ತು ನೆಲ್ಸನ್ ಮಂಡೇಲಾ ಬೇ ಜೈಂಟ್ಸ್ ವಿರುದ್ಧ ಪಂದ್ಯ ನಡೆಯುತ್ತಿದೆ. ಟಾಸ್ ವೇಳೆ ಮೈದಾನಕ್ಕೆ ಆಗಮಿಸಿದ ಪಾರ್ಲ್ ರಾಕ್ಸ್ ತಂಡದ ನಾಯಕ ಫಾಫ್ ಡು ಪ್ಲೆಸಿಸ್ಗೆ ತಂಡದಲ್ಲಿ ಯಾವುದಾದರೂ ಬದಲಾವಣೆ ಮಾಡಲಾಗಿದೆಯಾ ಎಂದು ಕೇಳಲಾಯಿತು.