ಮ್ಯಾಂಚೆಸ್ಟರ್: ವಿಶ್ವಕಪ್ನಲ್ಲಿ ಅದ್ಭುತ ಫಾರ್ಮ್ನಲ್ಲಿದ್ದ ರೋಹಿತ್ ಶರ್ಮಾ ಸೆಮಿಫೈನಲ್ ಪಂದ್ಯದಲ್ಲೂ ಆಕರ್ಷಕ ಪ್ರದರ್ಶನ ನೀಡಿ ತಂಡವನ್ನು ಫೈನಲ್ ದಡ ಸೇರಿಸುತ್ತಾರೆ ಎನ್ನುವುದು ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆಯಾಗಿತ್ತು. ಆದರೆ ಎಲ್ಲರ ನಂಬಿಕೆ ಹುಸಿಗೊಳಿಸಿರುವ ಹಿಟ್‌ಮ್ಯಾನ್ ಕೇವಲ 1ರನ್ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು.
ವಿಶ್ವಕಪ್ ಲೀಗ್‌ನಲ್ಲಿ ಇಂಗ್ಲೆಂಡ್ ವಿರುದ್ಧ (102), ಬಾಂಗ್ಲಾದೇಶ (104) ಹಾಗೂ ಶ್ರೀಲಂಕಾ (103) ಮೂಲಕ ಹ್ಯಾಟ್ರಿಕ್ ಸೆಂಚುರಿ ಬಾರಿಸಿದ್ದ ರೋಹಿತ್ ಶರ್ಮಾ ಬಗ್ಗೆ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಕೂಡ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಆದರೆ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಅವರ ಬ್ಯಾಟಿಂದ ರನ್ ಹರಿದು ಬರಲೇ ಇಲ್ಲ.