ದುಬೈ:ಕೋವಿಡ್-19 ಹಾಗೂ ತಮ್ಮ ಪತ್ನಿ 3ನೇ ಮಗುವಿಗೆ ಜನ್ಮ ನೀಡಲಿರುವ ಕಾರಣ ತಾವೂ ಈ ವರ್ಷದ ಬಿಗ್ ಬ್ಯಾಶ್ ಲೀಗ್ನಲ್ಲಿ ಆಡುವುದಿಲ್ಲ ಎಂದು ದಕ್ಷಿಣ ಆಫ್ರಿಕಾದ ಸ್ಫೊಟಕ ದಾಂಡಿಗ ಎಬಿ ಡಿವಿಲಿಯರ್ಸ್ ತಿಳಿಸಿದ್ದಾರೆ. ಆದರೆ ಭವಿಷ್ಯದಲ್ಲಿ ಬ್ರಿಸ್ಬೇನ್ ಹೀಟ್ ಪರ ಆಡಲು ತಾವೂ ತಯಾರಿರುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾದ 36 ವರ್ಷದ ಎಬಿಡಿ ಸದ್ಯ ದುಬೈನಲ್ಲಿ ನಡೆಯುತ್ತಿರುವ 2020ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿದ್ದಾರೆ.
ಶೀಘ್ರದಲ್ಲಿ ನಾನು ಮತ್ತೆ ಮೂರನೇ ಮಗುವಿಗೆ ತಂದೆಯಾಗಲಿದ್ದೇನೆ. ಕೋವಿಡ್-19 ಬಿಕ್ಕಟ್ಟಿನ ಈ ಸಂದರ್ಭದಲ್ಲಿ ನನ್ನ ಕಟುಂಬದವರೊಡನೇ ಇರಬೇಕಿದೆ. ಹಾಗಾಗಿ ನಾನು ಈ ವರ್ಷದ ಬಿಗ್ ಬ್ಯಾಶ್ ಲೀಗ್ನಲ್ಲಿ ಆಡದಿರಲು ನಿರ್ಧರಿಸಿದ್ದೇನೆ ಎಂದು ಎಬಿ ಡಿವಿಲಿಯರ್ಸ್ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಕಳೆದ ವರ್ಷ ವಿಲಿಯರ್ಸ್ ಕ್ರಿಸ್ ಲಿನ್ ನೇತೃತ್ವದ ಬ್ರಿಸ್ಬೇನ್ ಹೀಟ್ಸ್ ಪರ ಆಡಿದ್ದರು. ಆದರೆ ನಿರೀಕ್ಷೆಗೆ ತಕ್ಕ ಪ್ರದರ್ಶನ ತೋರದ ತಂಡ ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿತ್ತು.