ಮ್ಯಾಚೆಂಸ್ಟರ್:ವಿಶ್ವಕಪ್ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 92ರನ್ಗಳಿಸುವಷ್ಟರಲ್ಲಿ ಪ್ರಮುಖ 6ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ತಂಡಕ್ಕೆ ಆಸರೆಯಾಗಿದ್ದು ಆಲ್ರೌಂಡರ್ ರವೀಂದ್ರ ಜಡೇಜಾ. ಬರೋಬ್ಬರಿ 77ರನ್ಗಳಿಕೆ ಮಾಡಿ ತಂಡವನ್ನ ಗೆಲುವಿನ ದಡ ಸೇರಿಸುವಲ್ಲಿ ವಿಫಲವಾಗಿದ್ದರೂ ತಂಡವನ್ನು ಹೀನಾಯ ಸೋಲಿನಿಂದ ರಕ್ಷಣೆ ಮಾಡಿದ್ದಾರೆ. ಜಡೇಜಾ ಆಟಕ್ಕೆ ಎಲ್ಲಡೆಯಿಂದ ಪ್ರಶಂಸೆಗಳ ಸುರಿಮಳೆಯಾಗುತ್ತಿದ್ದು, ಈ ಮಧ್ಯೆ ಜಡ್ಡು ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.
ಕೊನೆಯುಸಿರು ಇರುವವರೆಗೂ ಅತ್ಯುತ್ತಮ ಆಟ ಆಡುವೆ: ಜಡೇಜಾ ಭಾವನಾತ್ಮಕ ಟ್ವೀಟ್! - ಭಾವನಾತ್ಮಕ ಟ್ವೀಟ್
ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಆಲ್ರೌಂಡರ್ ರವೀಂದ್ರ ಜಡೇಜಾ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪ್ರತಿ ಸೋಲಿನ ನಂತರ ಗೆಲ್ಲುವುದನ್ನು ಕ್ರಿಕೆಟ್ ನನಗೆ ಕಲಿಸಿಕೊಟ್ಟಿದೆ. ಅದನ್ನು ನಾನು ಎಂದಿಗೂ ಬಿಡುವುದಿಲ್ಲ. ನನ್ನ ಪ್ರೀತಿಯ ಮೂಲವಾದ ನನ್ನ ಅಭಿಮಾನಿಗಳಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು. ನನಗೆ ಸದಾ ಸ್ಫೂರ್ತಿದಾಯಕವಾಗಿರಿ ಮತ್ತು ನನ್ನ ಕೊನೆಯ ಉಸಿರಿರುವವರೆಗೂ ನನ್ನ ಕೈಲಾದಷ್ಟು ಅತ್ಯುತ್ತಮ ಆಟ ಆಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಧೋನಿ-ಜಡೇಜಾ ಸೇರಿ 7ನೇ ವಿಕೆಟ್ಗೆ 106ರನ್ಗಳ ಮಹತ್ವದ ಕೊಡುಗೆ ನೀಡಿದ್ದರು. ಈ ವೇಳೆ ಇವರಿಬ್ಬರ ವಿಕೆಟ್ ಬೀಳುತ್ತಿದ್ದಂತೆ ಟೀಂ ಇಂಡಿಯಾ ಸೋಲು ಕಾಣುವಂತಾಯಿತು. ಆದರೆ ಜಡೇಜಾ ಬ್ಯಾಟಿಂಗ್ ಪ್ರದರ್ಶನಕ್ಕೆ ಎಲ್ಲೆಡೆಯಿಂದ ಪ್ರಶಂಸೆಯ ಮಹಾಪೂರ ಹರಿದು ಬರ್ತಿದ್ದು, ಅದಕ್ಕೆ ಜಡೇಜಾ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.