ದುಬೈ :ಇತ್ತೀಚೆಗೆ ಮುಕ್ತಾಯವಾದ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ಅರ್ಧ ಶತಕ ಸಿಡಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಶ್ರೇಯಾಂಕದಲ್ಲಿ ಜಸ್ಪ್ರೀತ್ ಬುಮ್ರಾ 3ನೇ ಸ್ಥಾನದಲ್ಲಿದ್ದಾರೆ.
ಐಸಿಸಿ ಹೊಸದಾಗಿ ಬಿಡುಗಡೆ ಮಾಡಿರುವ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 870 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ರೆ, ರೋಹಿತ್ ಶರ್ಮಾ 842 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ತಂಡದ ಆಟಗಾರ ಬಾಬರ್ ಅಜಮ್ 837 ಅಂಕ ಪಡೆದು 3ನೇ ಸ್ಥಾನ ಪಡೆದಿದ್ದಾರೆ.