ಹೈದರಾಬಾದ್ :ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಸಿಡ್ನಿ ಟೆಸ್ಟ್ ನಂತರ ಐಸಿಸಿ ಇತ್ತೀಚಿನ ಟೆಸ್ಟ್ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಬ್ಯಾಟಿಂಗ್ ವಿಭಾಗದಲ್ಲಿ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ನಂಬರ್-1 ಸ್ಥಾನದಲ್ಲಿದ್ರೆ, ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾದ ಬೌಲರ್ ಪ್ಯಾಟ್ ಕಮ್ಮಿನ್ಸ್ ಪ್ರಥಮ ಸ್ಥಾನದಲ್ಲಿದ್ದಾರೆ.
ಭಾರತದ ನಾಯಕ ವಿರಾಟ್ ಕೊಹ್ಲಿ 2ನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಆರನೇ ಸ್ಥಾನದಲ್ಲಿದ್ದ ಅಜಿಂಕ್ಯ ರಹಾನೆ ಒಂದು ಸ್ಥಾನ ಕಳೆದುಕೊಂಡು ಈಗ ಏಳನೇ ಸ್ಥಾನದಲ್ಲಿದ್ದಾರೆ.