ದುಬೈ:ಐಸಿಸಿ ಮಹಿಳಾ ಏಕದಿನ ಶ್ರೇಯಾಂಕ ಪಟ್ಟಿ ರಿಲೀಸ್ ಆಗಿದ್ದು, ಆರಂಭಿಕ ಬ್ಯಾಟ್ಸಮನ್ ಸ್ಮೃತಿ ಮಂಧಾನಾ 710 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದು, ಕ್ಯಾಪ್ಟನ್ ಮಿಥಾಲಿ ರಾಜ್ 709 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.
ಇಂಗ್ಲೆಂಡ್ನ ಥಾಮಿ 765 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಬೌಲಿಂಗ್ ವಿಭಾಗದಲ್ಲಿ ವೇಗದ ಬೌಲರ್ ಗೋಸ್ವಾಮಿ 681 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದ್ದಾರೆ.
ಉಳಿದಂತೆ 2019ರ ನವೆಂಬರ್ ತಿಂಗಳಲ್ಲಿ ಏಕದಿನ ಪಂದ್ಯವನ್ನಾಡಿದ್ದ ಶಿಖಾ 610 ಅಂಕಗಳೊಂದಿಗೆ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದ ಹೆಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.