ದುಬೈ :ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಕೇವಲ 30 ಎಸೆತಗಳಲ್ಲಿ ಆಕರ್ಷಕ 60 ರನ್ಗಳಿಸಿದ್ದ ಭಾರತದ ಯುವ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಐಸಿಸಿ ಮಂಗಳವಾರ ಬಿಡುಗಡೆ ಮಾಡಿದ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.
ಈ ಪಂದ್ಯದ ನಂತರ ವರ್ಮಾ 26 ರೇಟಿಂಗ್ ಅಂಕಗಳನ್ನು ಪಡೆದುಕೊಂಡಿದ್ದರು. ಇದೀಗ ಅವರು 776 ಅಂಕಗಳನ್ನು ಹೊಂದಿದ್ದು, 2ನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಬೆತ್ ಮೂನಿ ಅವರಿಗಿಂತ 35 ಅಂಕ ಮುಂದಿದ್ದಾರೆ. ಭಾರತದ ಮತ್ತೊಬ್ಬ ಸ್ಟಾರ್ ಸ್ಮೃತಿ ಮಂಧಾನ 6ನೇ ಮತ್ತು ಜಮೀಮಾ ರೋಡ್ರಿಗಸ್ 9ನೇ ಸ್ಥಾನದಲ್ಲಿದ್ದಾರೆ.
ಬೌಲರ್ಗಳ ವಿಭಾಗದಲ್ಲಿ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ 12 ಸ್ಥಾನ ಮೇಲೇರಿ 13ನೇ ಶ್ರೇಯಾಂಕ ಪಡೆದಿದ್ದಾರೆ. ದೀಪ್ತಿ ಶರ್ಮಾ ಮತ್ತು ರಾಧ ಯಾದವ್ 7 ಮತ್ತು 8ರಲ್ಲಿ ಮುಂದುವರಿದಿದ್ದಾರೆ.
ಕಿವೀಸ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಜೇಯ73 ರನ್ಗಳಿಸಿದ್ದ ಆಶ್ಲೀ ಗಾರ್ಡ್ನರ್ ಜೀವನ ಶ್ರೇಷ್ಠ 11ನೇ ಶ್ರೇಯಾಂಕ ಪಡೆದಿದ್ದಾರೆ. ಜಾರ್ಜಿಯಾ ವಾರೆಹಮ್ ಬೌಲರ್ಗಳ ಶ್ರೇಯಾಂಕದಲ್ಲಿ ಟಾಪ್ 10ಕ್ಕೆ ಪ್ರವೇಶಿಸಿದ್ದಾರೆ. ಇಂಗ್ಲೆಂಡ್ನ ಸೋಫಿ ಎಕ್ಲೆಸ್ಟೋನ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
ಇದನ್ನು ಓದಿ:2ನೇ ಟಿ20.. ಬಾಂಗ್ಲಾದೇಶವನ್ನು 28ರನ್ಗಳಿಂದ ಮಣಿಸಿ 2-0ಯಲ್ಲಿ ಸರಣಿ ವಶಪಡಿಸಿಕೊಂಡ ಕಿವೀಸ್