ಲಾರ್ಡ್ಸ್: 2019ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.
ಚೊಚ್ಚಲ ವಿಶ್ವಕಪ್ ಮೇಲೆ ಕಣ್ಣಿರುವ ಎರಡು ತಂಡಗಳು ಫೈನಲ್ ಪಂದ್ಯದಲ್ಲಿ ಸೆಣಸಾಡುತ್ತಿದ್ದು, ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಇಂಗ್ಲೆಂಡ್ ತಂಡ ಗೆಲುವಿನ ನೆಚ್ಚಿನ ತಂಡವಾಗಿದೆ. ಆದರೆ ಟಾಸ್ ಗೆದ್ದಿರುವ ಕಿವೀಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವುದರಿಂದ ಇಂಗ್ಲೆಂಡ್ಗೆ ಪ್ರಭಲ ಪೈಪೋಟಿ ನೀಡಲಿದೆ. ಅಲ್ಲದೆ ಕಿವೀಸ್ ಬೌಲಿಂಗ್ ದಾಳಿ ಅತ್ಯುತ್ತಮವಾಗಿದ್ದು ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ ಕಂಡುಬರಲಿದೆ
ವಿಶ್ವಕಪ್ ಇತಿಹಾಸದಲ್ಲಿ ಇಂಗ್ಲೆಂಡ್ ನಾಲ್ಕನೇ ಬಾರಿ ಫೈನಲ್ ಪ್ರವೇಶಿಸಿದ್ದರೆ, ನ್ಯೂಜಿಲ್ಯಾಂಡ್ ಎರಡನೇ ಬಾರಿ ಫೈನಲ್ ಪ್ರವೇಶಿಸಿದೆ. ಎರಡು ತಂಡಗಳಲ್ಲಿ ಯಾವ ತಂಡ ಗೆದ್ದರೂ ತಮ್ಮ ಮೊದಲ ವಿಶ್ವಕಪ್ ಗೆದ್ದಂತಾಗುತ್ತದೆ.