ಕರ್ನಾಟಕ

karnataka

ETV Bharat / sports

ಇಂಗ್ಲೆಂಡ್​ ವಿರುದ್ಧ ಸೋಲು: ಟೆಸ್ಟ್​ ಚಾಂಪಿಯನ್​ಶಿಪ್​ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದ ಭಾರತ - ಚೆನ್ನೈ ಟೆಸ್ಟ್​

ಈ ಸೋಲಿನಿಂದ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಅಂಕಪಟ್ಟಿಯಲ್ಲಿ ಗೆಲುವಿನ ಸರಾಸರಿ 68.3ಕ್ಕೆ ಕುಸಿದಿದ್ದರಿಂದ ಮೊದಲ ಸ್ಥಾನದಲ್ಲಿದ್ದ ಭಾರತ 4ನೇ ಸ್ಥಾನಕ್ಕಿಳಿದರೆ, ಇಂಗ್ಲೆಂಡ್ ಈ ಗೆಲುವಿನೊಂದಿಗೆ ಗೆಲುವಿನ ಸರಾಸರಿಯನ್ನು 70.2ಕ್ಕೆ ಏರಿಸಿಕೊಂಡು ಅಗ್ರಸ್ಥಾನಕ್ಕೆ ಬಡ್ತಿ ಪಡೆದಿದೆ.

ಟೆಸ್ಟ್​ ಚಾಂಪಿಯನ್​ಶಿಪ್​ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದ ಭಾರತ
ಟೆಸ್ಟ್​ ಚಾಂಪಿಯನ್​ಶಿಪ್​ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದ ಭಾರತ

By

Published : Feb 9, 2021, 2:22 PM IST

ಲಂಡನ್​: ಇಂಗ್ಲೆಂಡ್​ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯವನ್ನು ಭಾರತ 227 ರನ್​ಗಳಿಂದ ಸೋಲುಕಂಡ ನಂತರ ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಿಂದ 4ನೇ ಸ್ಥಾನಕ್ಕೆ ಕುಸಿದಿದೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 420 ರನ್​ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಕೊಹ್ಲಿ ಪಡೆ ಬ್ಯಾಟಿಂಗ್ ವೈಫಲ್ಯದಿಂದ 192 ರನ್​ಗಳಿಗೆ ಆಲೌಟ್ ಆಗುವ ಮೂಲಕ 227ರನ್​ಗಳ ಸೋಲು ಕಂಡಿತು.

ಈ ಸೋಲಿನಿಂದ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಅಂಕಪಟ್ಟಿಯಲ್ಲಿ ಗೆಲುವಿನ ಸರಾಸರಿ 68.3ಕ್ಕೆ ಕುಸಿದಿದ್ದರಿಂದ ಮೊದಲ ಸ್ಥಾನದಲ್ಲಿದ್ದ ಭಾರತ 4ನೇ ಸ್ಥಾನಕ್ಕಿಳಿದರೆ, ಇಂಗ್ಲೆಂಡ್ ಈ ಗೆಲುವಿನೊಂದಿಗೆ ಗೆಲುವಿನ ಸರಾಸರಿಯನ್ನು 70.2ಕ್ಕೇ ಏರಿಸಿಕೊಂಡು ಅಗ್ರಸ್ಥಾನಕ್ಕೆ ಬಡ್ತಿ ಪಡೆದಿದೆ.

ಇನ್ನು ನ್ಯೂಜಿಲ್ಯಾಂಡ್​ 70 ಗೆಲುವಿನ ಸರಾಸರಿ ಅಂಕದೊಂದಿಗೆ 2ನೇ ಸ್ಥಾನದಲ್ಲಿ, ಆಸ್ಟ್ರೇಲಿಯಾ 69.5ರ ಸರಾಸರಿ ಅಂಕದೊಂದಿದೆ 3ನೇ ಸ್ಥಾನದಲ್ಲಿ ತಟಸ್ಥವಾಗಿವೆ.

ಭಾರತ ತಂಡ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್ ಪ್ರವೇಶಿಸಬೇಕಾದರೆ ಮುಂದಿನ 3 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

ಇದನ್ನೂ ಓದಿ:ಚೆನ್ನೈ ಟೆಸ್ಟ್​: ಇಂಗ್ಲೆಂಡ್​ ವಿರುದ್ಧ ಭಾರತಕ್ಕೆ 227 ರನ್​ಗಳ ಹೀನಾಯ ಸೋಲು

ABOUT THE AUTHOR

...view details