ನಾಗ್ಪುರ್: ಪ್ರವಾಸಿ ಬಾಂಗ್ಲಾದೇಶದ ವಿರುದ್ಧ ನಡೆದ ಮೂರು ಟಿ-20 ಪಂದ್ಯಗಳ ಸರಣಿಯನ್ನ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ರೂ ಎರಡು ಹಾಗೂ ಮೂರನೇ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಯಂಗ್ ಇಂಡಿಯಾ ತಮ್ಮ ಸಾಮರ್ಥ್ಯ ಏನು ಎಂದು ತೋರಿಸಿಕೊಟ್ಟಿದೆ.
ಪಂದ್ಯ ಮುಗಿದ ಬಳಿಕ ಮಾತನಾಡಿರುವ ಕ್ಯಾಪ್ಟನ್ ರೋಹಿತ್ ಶರ್ಮಾ, ನಾವು ಮುಂದಿನ ಟಿ-20 ಸರಣಿಯಲ್ಲಿ ಇದೇ ರೀತಿಯ ಪ್ರದರ್ಶನ ನೀಡಿದರೆ ಖಂಡಿತವಾಗಿ ವಿರಾಟ್ ಕೊಹ್ಲಿ ಹಾಗೂ ಆಯ್ಕೆ ಸಮಿತಿಗೆ ದೊಡ್ಡ ತಲೆನೋವು ಆಗಿ ಪರಿಣಮಿಸಲಿದೆ ಎಂದು ತಿಳಿಸಿದ್ದಾರೆ.