ಸಿಡ್ನಿ:ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ 2ನೇ ದಿನದಾಟದ ಮೊದಲ ಸೆಷನ್ನಲ್ಲು ಉತ್ತಮವಾಗಿ ಸ್ಪೆಲ್ ಮಾಡಿದ ಟೀಂ ಇಂಡಿಯಾ ಬೌಲರ್ಗಳು ಪ್ರಮುಖ ಮೂರು ವಿಕೆಟ್ ಪಡೆದು ಮೇಲುಗೈ ಸಾಧಿಸಿದ್ದಾರೆ.
ಮಳೆಯ ಕಾರಣ ಮೊದಲ ದಿನದ ಪಂದ್ಯದಲ್ಲಿ ಓವರ್ಗಳನ್ನು ಕಡಿತ ಮಾಡಿದ್ದ ಪರಿಣಾಮ ಎರಡನೇ ದಿನದಾಟ ನಿಗದಿತ ಸಮಯಕ್ಕಿಂತ ಮೊದಲೇ ಆರಂಭವಾಯಿತು. ಮೊದಲ ದಿನದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡ 2 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿತ್ತು.
ಇಂದು ಇನ್ನಿಂಗ್ಸ್ ಆರಂಭಿಸಿದ ಸ್ಟೀವ್ ಸ್ಮಿತ್ ಮತ್ತು ಲಾಬುಶೇನ್ ಉತ್ತಮವಾಗಿ ಬ್ಯಾಟ್ ಬೀಸಿದ್ರು. ಈ ಜೋಡಿ ಮೂರನೇ ವಿಕೆಟ್ಗೆ 100 ರನ್ಗಳ ಜೊತೆಯಾಟವಾಡಿತು. ಉತ್ತಮವಾಗಿ ಬ್ಯಾಟ್ ಬೀಸಿದ ಸ್ಮಿತ್ ಟೆಸ್ಟ್ ಕ್ರಿಕೆಟ್ನಲ್ಲಿ 30ನೇ ಅರ್ಧಶತಕ ಸಿಡಿಸಿದ್ರು. ನಿನ್ನೆಯಿಂದಲೂ ಭಾರತೀಯ ಬೌಲರ್ಗಳನ್ನು ಕಾಡಿದ್ದ ಈ ಜೋಡಿಯನ್ನು ರವೀಂದ್ರ ಜಡೇಜಾ ಬೇರ್ಪಡಿಸಿದ್ರು.
91 ರನ್ ಗಳಿಸಿದ್ದ ಲಾಬುಶೇನ್ ಜಡೇಜಾ ಬೌಲಿಂಗ್ನಲ್ಲಿ ಪೂಜಾರಗೆ ಕ್ಯಾಚ್ನೀಡಿ ನಿರ್ಗಮಿಸಿದ್ರು. ನಂತರ ಬಂದ ಮ್ಯಾಥ್ಯೂ ವೇಡ್ ಕೇವಲ 13 ರನ್ಗಳಿಸಿ ಜಡೇಜಾಗೆ ವಿಕೆಟ್ ಒಪ್ಪಿಸಿದ್ರು. 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ರೀನ್ ಬುಮ್ರಾ ಎಸೆತದಲ್ಲಿ ಎಲ್ಬಿ ಬಲೆಗೆಬಿದ್ದು ಶೂನ್ಯ ಸುತ್ತಿದ್ರು.
ಮೊದಲ ಸೆಷನ್ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡ 5 ವಿಕೆಟ್ ಕಳೆದುಕೊಂಡು 249 ರನ್ ಗಳಿಸಿದೆ. ಸ್ಟೀವ್ ಸ್ಮಿತ್ 76 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.