ಕರ್ನಾಟಕ

karnataka

ETV Bharat / sports

ಭಾರತ - ಆಸ್ಟ್ರೇಲಿಯಾ 3ನೇ ಟೆಸ್ಟ್: ಸಿಡ್ನಿ ಮೈದಾನದಲ್ಲಿ ಪ್ರೇಕ್ಷಕರಿಗೆ ಮಾಸ್ಕ್ ಕಡ್ಡಾಯ - ಪ್ರೇಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯ

ಸಿಡ್ನಿಯಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಪರಿಣಾಮ ಸಾಮಾಜಿಕ ಅಂತರ ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರೇಕ್ಷಕರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

Fans at SCG must wear masks at all times
ಸಿಡ್ನಿ ಮೈದಾನದಲ್ಲಿ ಪ್ರೇಕ್ಷಕರಿಗೆ ಮಾಸ್ಕ್ ಕಡ್ಡಾಯ

By

Published : Jan 6, 2021, 12:08 PM IST

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ಆರಂಭವಾಗಲಿರುವ 3ನೇ ಟೆಸ್ಟ್ ಪಂದ್ಯಕ್ಕೆ ಆಗಮಿಸುವ ಪ್ರೇಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಾಳೆಯಿಂದ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಮೈದಾನದ ಸಾಮರ್ಥ್ಯದ 25 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗುತ್ತದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸ್ಪಷ್ಟಪಡಿಸಿತ್ತು. ಇದೀಗ ಮೈದಾನದಲ್ಲಿ ಕುಳಿತ ಪ್ರೇಕ್ಷಕರು ತಿನ್ನುವಾಗ ಅಥವಾ ಕುಡಿಯುವಾಗ ಹೊರತು ಪಡಿಸಿ ಬೇರೆಲ್ಲಾ ಸಮಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ನ್ಯೂ ಸೌತ್ ವೇಲ್ಸ್ ನ ಆರೋಗ್ಯ ಸಚಿವ ತಿಳಿಸಿದ್ದಾರೆ.

ಓದಿ62ನೇ ಜನ್ಮದಿನದ ಸಂಭ್ರಮದಲ್ಲಿ ಹರಿಯಾಣ ಹರಿಕೇನ್: ಕಪಿಲ್ ದೇವ್​​ ಕುರಿತ ಇಂಟ್ರೆಸ್ಟಿಂಗ್‌ ಸಂಗತಿಗಳು

ಐದು ದಿನಗಳ ಪಂದ್ಯವು ಗುರುವಾರ ಆರಂಭವಾಗಲಿದ್ದು, 48 ಸಾವಿರ ಸಾಮರ್ಥ್ಯದ ಸ್ಟೇಡಿಯಂನಲ್ಲಿ ಸುಮಾರು 10,000 ಪ್ರೇಕ್ಷಕರು ಆಗಮಿಸುವ ನಿರೀಕ್ಷೆ ಇದೆ. ಸಿಡ್ನಿಯಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಪರಿಣಾಮ ಸಾಮಾಜಿಕ ಅಂತರ ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ABOUT THE AUTHOR

...view details