ಕ್ಯಾನ್ಬೆರಾ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಟಿ20 ಸರಣಿಯ ಇನ್ನುಳಿದ ಪಂದ್ಯಗಳಿಂದ ಹೊರ ಬಿದ್ದಿದ್ದಾರೆ.
ಶುಕ್ರವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿದ್ದ ಜಡೇಜಾ, 23 ಎಸೆತಗಳಿಗೆ 44 ರನ್ ಸಿಡಿಸಿ ಟೀಂ ಇಂಡಿಯಾಕ್ಕೆ ಆಸರೆಯಾಗಿದ್ದರು. ಆದರೆ ಪಂದ್ಯದ ಅಂತಿಮ ಓವರ್ನಲ್ಲಿ ಜಡೇಜಾ ತಲೆಗೆ ಚೆಂಡು ಬಡಿದು ಗಾಯವಾಗಿತ್ತು.