ಬ್ರಿಸ್ಬೇನ್ (ಆಸ್ಟ್ರೇಲಿಯಾ):ಗಬ್ಬಾ ಮೈದಾನದಲ್ಲಿ ಆಸೀಸ್ ಬೌಲರ್ಗ ಲೆಕ್ಕಾಚಾರ ಉಲ್ಟಾ ಮಾಡಿ ಶತಕದ ಜೊತೆಯಾಟವಾಡಿದ ವಾಷಿಂಗ್ಟನ್ ಸುಂದರ್ ಮತ್ತು ಶಾರ್ದೂಲ್ ಠಾಕೂರ್ 30 ವರ್ಷಗಳ ಹಳೆಯ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ.
ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಉತ್ತಮ ಪ್ರದರ್ಶನ ತೋರಿದ ವಾಷಿಂಗ್ಟನ್ ಸುಂದರ್ ಅರ್ಧಶತಕ ಸಿಡಿಸಿ ಮಿಂಚಿದ್ರೆ, ಎರಡನೇ ಟೆಸ್ಟ್ ಪಂದ್ಯವಾಡುತ್ತಿರುವ ಶಾರ್ದೂಲ್ ಕೂಡ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ರು. ಈ ಜೋಡಿ 7ನೇ ವಿಕೆಟ್ಗೆ 123ರನ್ಗಳನ್ನು ಕಲೆಹಾಕಿದೆ. ಈ ಮೂಲಕ ಗಬ್ಬಾ ಮೈದಾನದಲ್ಲಿ 7ನೇ ವಿಕೆಟ್ಗೆ ಅತಿಹೆಚ್ಚು ರನ್ ಪೇರಿಸಿದ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.