ನವದೆಹಲಿ: ಕ್ಯಾಪ್ಟನ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜನವರಿಯ ಮೊದಲ ವಾರದಲ್ಲಿ ಮಗುವಿಗೆ ಜನ್ಮ ನೀಡುವ ಸಾಧ್ಯತೆ ಹಿನ್ನೆಲೆ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಅಥವಾ ಮೂರು ಟೆಸ್ಟ್ಗಳನ್ನು ಆಡುವುದು ಅನುಮಾನವಾಗಿದ್ದು, ರೋಹಿತ್ ಶರ್ಮಾ ಟೆಸ್ಟ್ ತಂಡ ಕೂಡಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ.
ಕೊಹ್ಲಿ ಅಲಭ್ಯತೆ ಹಿನ್ನೆಲೆ ರೋಹಿತ್ ಶರ್ಮಾ ಟೀಂ ಇಂಡಿಯಾದ ಸೇರಿಕೊಳ್ಳಲಿದ್ದು, ಟೆಸ್ಟ್ ಸರಣಿಯಲ್ಲಿ ಮಾತ್ರ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. "ಅವರು ಖಂಡಿತವಾಗಿಯೂ ಆಸ್ಟ್ರೇಲಿಯಾ ಸರಣಿಯ ಭಾಗವಾಗುತ್ತಾರೆ. ಆದರೆ ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಆಸ್ಟ್ರೇಲಿಯಾದಲ್ಲಿ ಕ್ವಾರಂಟೈನ್ ಅವಧಿ ಬಗ್ಗೆ ಗೊತ್ತಿಲ್ಲ, ಆದರೆ ಸಮಯಕ್ಕೆ ಸರಿಯಾಗಿ ಲಭ್ಯರಾಗಲಿದ್ದಾರೆ" ಎಂದು ಮೂಲಗಳು ತಿಳಿಸಿವೆ.