ಚೆನ್ನೈ:ಭಾರತ-ಇಂಗ್ಲೆಂಡ್ ತಂಡಗಳ ನಡುವೆ ಚೆನ್ನೈನ ಪಿ.ಚಿದಂಬರಂ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಬ್ಯಾಟಿಂಗ್ ನಡೆಸುತ್ತಿರುವ ಆಂಗ್ಲರ ಪಡೆ ಮೊದಲ ದಿನವೇ ಭದ್ರ ಬುನಾದಿ ಹಾಕಿದೆ.
ಓದಿ: ಸಿಬ್ಲಿ - ರೂಟ್ ಬೊಂಬಾಟ್ ಆಟಕ್ಕೆ ಭಾರತ ಸುಸ್ತು.. ಮೊದಲ ದಿನದಾಂತ್ಯಕ್ಕೆ ಇಂಗ್ಲೆಂಡ್ 263ರನ್
ಇಂಗ್ಲೆಂಡ್ ತಂಡದ ಕ್ಯಾಪ್ಟನ್ ರೂಟ್ ಶತಕ ಸಿಡಿಸಿ ನಾಳೆಗೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದ್ದು, ಇದರ ಮಧ್ಯೆ ಮೈದಾನದಲ್ಲಿ ನಡೆದಿರುವ ಘಟನೆವೊಂದು ಎಲ್ಲರ ಮನಗೆದ್ದಿದೆ. 87ರನ್ಗಳಿಕೆ ಮಾಡಿ ಬ್ಯಾಟ್ ಮಾಡ್ತಿದ್ದ ರೂಟ್, ಆರ್.ಅಶ್ವಿನ್ ಎಸೆದ ಓವರ್ನಲ್ಲಿ ಸಿಕ್ಸರ್ ಸಿಡಿಸಿದರು. ಈ ವೇಳೆ ಸ್ನಾಯು ಸೆಳೆತಕ್ಕೊಳಗಾದ ಇಂಗ್ಲೆಂಡ್ ಕ್ಯಾಪ್ಟನ್ ರೂಟ್ಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಹಾಯ ಮಾಡಿ ಕ್ರೀಡಾ ಸ್ಫೂರ್ತಿ ಮೆರೆದಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಕೊಹ್ಲಿ ಮೈದಾನದಲ್ಲಿ ರೂಟ್ಗೆ ಸಹಾಯ ಮಾಡುತ್ತಿರುವ ವಿಡಿಯೋವನ್ನ ಬಿಸಿಸಿಐ ತನ್ನ ಟ್ವೀಟರ್ ಅಕೌಂಟ್ನಲ್ಲಿ ಹಂಚಿಕೊಂಡಿದ್ದು, ಅದಕ್ಕೆ ಎಲ್ಲಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.