ಅಹ್ಮದಾಬಾದ್: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ ಜೋಫ್ರಾ ಆರ್ಚರ್ ವಿಕೆಟ್ ಪಡಯುವ ಮೂಲಕ ಭಾರತದ ಅನುಭವಿ ಸ್ಪಿನ್ ಬೌಲರ್ ಅಶ್ವಿನ್, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ವೇಗವಾಗಿ 400 ವಿಕೆಟ್ ಪಡೆದ 2ನೇ ಬೌಲರ್ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
ಅಶ್ವಿನ್ ವೃತ್ತಿ ಜೀವನದ 77ನೇ ಟೆಸ್ಟ್ ಪಂದ್ಯದಲ್ಲಿ 400 ವಿಕೆಟ್ ಸಾಧನೆ ಮಾಡಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್ ಕೇವಲ 72 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿ ಮೊದಲ ಸ್ಥಾನದಲ್ಲಿದ್ದಾರೆ.
ನ್ಯೂಜಿಲ್ಯಾಂಡ್ನ ರಿಚರ್ಡ್ ಹ್ಯಾಡ್ಲಿ ಮತ್ತು ದಕ್ಷಿಣ ಆಫ್ರಿಕಾ ಡೇಲ್ ಸ್ಟೈನ್ 80 ಪಂದ್ಯಗಳಿಂದ 400 ವಿಕೆಟ್ ಪಡೆದು 3ನೇ ಸ್ಥಾನದಲ್ಲಿದ್ದಾರೆ. ರಂಗನಾ ಹೆರಾತ್ 84 ಹಾಗೂ ಅನಿಲ್ ಕುಂಬ್ಳೆ 85 ಪಂದ್ಯ ತೆಗೆದುಕೊಂಡಿದ್ದಾರೆ.