ಕೋಲ್ಕತ್ತಾ:ಇಲ್ಲಿ ನಡೆದ ಭಾರತ ಮತ್ತು ಬಾಂಗ್ಲಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 46 ರನ್ಗಳಿಂದ ಜಯ ದಾಖಲಿಸಿದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಜಯಭೇರಿ ಬಾರಿಸಿದೆ.
ಎರಡನೇ ದಿನದಾಟದ ಅಂತ್ಯಕ್ಕೆ 33.3 ಓವರ್ಗಳಲ್ಲಿ 152 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದ ಬಾಂಗ್ಲಾ ತಂಡ ಮೂರನೇ ದಿನ ಬ್ಯಾಟಿಂಗ್ ಆರಂಭಿಸಿತು. ದಿನದಾಟದ ಆರಂಭದಲ್ಲೇ ಶಾಕ್ ನೀಡಿದ ಉಮೇಶ್ ಯಾದವ್, ಇಬಾದತ್ಗೆ ಪೆವಿಲಿಯನ್ ದಾರಿ ತೋರಿಸಿದ್ರು.
ಒಂದೆಡೆ ವಿಕೆಟ್ ಬೀಳುತ್ತಿದ್ರೂ ಉತ್ತಮವಾಗಿ ಬ್ಯಾಟ್ ಬೀಸುತಿದ್ದ ಮುಷ್ಫೀಕರ್ ರಹೀಮ್ ಆಕರ್ಷಕ ಅರ್ಧ ಶತಕ ಸಿಡಿಸಿ ಭರವಸೆ ಮೂಡಿಸಿದ್ರು. ಆದ್ರೆ ತಂಡ 74 ರನ್ ಗಳಿಸಿರುವಾಗ ಉಮೇಶ್ ಯಾದವ್ ಎಸೆತದಲ್ಲಿ ಜಡೇಜಾಗೆ ಕ್ಯಾಚ್ ನೀಡಿ ನಿರ್ಗಮಿಸಿದ್ರು. ಅಂತಿಮವಾಗಿ ಬಾಂಗ್ಲಾ ತಂಡ 41.1 ಓವರ್ಗಳಲ್ಲಿ 195ರನ್ಗಳಿಗೆ ಸರ್ವಪತನ ಕಂಡು ಇನ್ನಿಂಗ್ಸ್ ಮತ್ತು 46 ರನ್ಗಳಿಂದ ಸೋಲೊಪ್ಪಿಕೊಂಡಿತು.
ಭಾರತದ ಪರ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ಉಮೇಶ್ ಯಾದವ್ 5 ವಿಕೆಟ್ ಪಡೆದು ಮಿಂಚಿದ್ರೆ, ಇಶಾಂತ್ ಶರ್ಮಾ 4 ವಿಕೆಟ್ ಕಬಳಿಸಿದ್ರು.
ಟೆಸ್ಟ್ ಸರಣಿ ಮತ್ತು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ವೇಗಿ ಇಶಾಂತ್ ಶರ್ಮಾ ಪಂದ್ಯ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.