ಕರ್ನಾಟಕ

karnataka

ETV Bharat / sports

ಟಿ-20ಯಲ್ಲಿ 2ನೇ ಸ್ಥಾನಕ್ಕೆ ಬಡ್ತಿ ಪಡೆದ ಟೀಂ ಇಂಡಿಯಾ - ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಟಿ20 ಕ್ರಿಕೆಟ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತ ತಂಡ ತನ್ನ ಸ್ಥಾನ ಹೆಚ್ಚಿಸಿಕೊಳ್ಳುವಲ್ಲಿ ಸಫಲವಾಗಿದೆ.

India
ಟೀಂ ಇಂಡಿಯಾ

By

Published : Mar 11, 2021, 9:51 AM IST

ದುಬೈ:ಆಸ್ಟ್ರೇಲಿಯಾ ವಿರುದ್ಧ ಟಿ-20 ಸರಣಿ ಗೆದ್ದಿರುವ ಕೊಹ್ಲಿ ಪಡೆ ಟಿ-20ಯಲ್ಲಿ 2 ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್​ ತಂಡ 3-0 ಯಿಂದ ಸರಣಿ ಗೆಲ್ಲುವ ಮೂಲಕ ಅಗ್ರಸ್ಥಾನಕ್ಕೆ ತೆರಳಿದೆ.

ಈ ಸಂಬಂಧ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಟಿ20 ಕ್ರಿಕೆಟ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತ ತಂಡ ತನ್ನ ಸ್ಥಾನ ಹೆಚ್ಚಿಸಿಕೊಳ್ಳುವಲ್ಲಿ ಸಫಲವಾಗಿದೆ. ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆದ್ದ ಹಿನ್ನೆಲೆಯಲ್ಲಿ ಭಾರತ ಈ ಸಾಧನೆ ಮಾಡಿದೆ.

ಟಿ-20 ಕ್ರಿಕೆಟ್​ನಲ್ಲಿ ಉತ್ತಮ ಫಾರ್ಮ್​ನಲ್ಲಿರುವ ಕರ್ನಾಟಕದ ಆಟಗಾರ ಕೆ.ಎಲ್ ರಾಹುಲ್ ಎರಡನೇ ಸ್ಥಾನ ಉಳಿಸಿಕೊಂಡಿದ್ದರೆ, ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನ ಕುಸಿದು ಆರನೇ ಸ್ಥಾನಕ್ಕೆ ಭಾಜನರಾಗಿದ್ದಾರೆ. ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ಮಲಾನ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು 915 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ 816 ಅಂಕ ಗಳಿಸಿ 2 ಸ್ಥಾನದಲ್ಲೇ ಮುಂದುವರಿದಿದ್ದಾರೆ.

ಕಳೆದ ಸರಣಿಯಲ್ಲಿ ಉತ್ತಮವಾಗಿ ಆಡಿದ್ದ ಆರೋನ್ ಫಿಂಚ್ 808 ಅಂಕ ಗಳಿಸಿ ಮೂರನೇ ಸ್ಥಾನದಲ್ಲಿದ್ದರೆ ಪಾಕಿಸ್ತಾನದ ಬಾಬರ್ ಅಜಾಂ 801 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾ ಲೀಡರ್​ ವಿರಾಟ್ ಕೊಹ್ಲಿ 697 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.

ABOUT THE AUTHOR

...view details