ಸಿಡ್ನಿ:ಐಸಿಸಿ ಮಹಿಳಾ ಟಿ-20ಯ ಇಂಗ್ಲೆಂಡ್-ಇಂಡಿಯಾ ನಡುವಿನ ಪಂದ್ಯ ಮಳೆಯಿಂದ ರದ್ದುಗೊಂಡಿರುವ ಕಾರಣ, ನಂಬರ್ 1 ಸ್ಥಾನದಲ್ಲಿದ್ದ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮಹಿಳಾ ತಂಡ ಫೈನಲ್ಗೆ ಲಗ್ಗೆ ಹಾಕಿದೆ.
ಇಂದು ಭಾರತ-ಇಂಗ್ಲೆಂಡ್ ನಡುವೆ ಸೆಮಿಫೈನಲ್ ಪಂದ್ಯ ನಡೆಬೇಕಾಗಿತ್ತು. ಆದರೆ, ಬೆಳಗ್ಗೆಯಿಂದ ನಿರಂತರವಾಗಿ ಮಳೆ ಸುರಿದ ಕಾರಣ ಪಂದ್ಯ ರದ್ದುಗೊಳಿಸಲಾಯಿತು. ಲೀಗ್ ಪಂದ್ಯದಲ್ಲಿ ತಾನಾಡಿರುವ ಎಲ್ಲ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಮಹಿಳಾ ಪಡೆ ಅಂಕಪಟ್ಟಿಯಲ್ಲಿ ನಂಬರ್ 1ಸ್ಥಾನದಲ್ಲಿದ್ದ ಕಾರಣ ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ.