ಹೈದರಾಬಾದ್: ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ನಡೆಯಬೇಕಾಗಿದ್ದ ಬಹುನಿರೀಕ್ಷಿತ ಟಿ-20 ವಿಶ್ವಕಪ್ ಮುಂದೂಡಿಕೆಯಾಗಿದ್ದು, ಭಾರತದಲ್ಲಿ ನಡೆಯುವುದು ಖಚಿತವಾಗಿದೆ.
ಮುಂದಿನ ವರ್ಷ ಅಂದರೆ 2021ರ ಟಿ-20 ವಿಶ್ವಕಪ್ ಭಾರತದಲ್ಲಿ ಹಾಗೂ 2020 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ಆಯೋಜನೆಗೊಂಡಿತ್ತು. ಕೊರೊನಾ ವೈರಸ್ ಕಾರಣ ಕಾಂಗರೂ ನಾಡಿನಲ್ಲಿ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಬೇಕಾಗಿದ್ದ ಟೂರ್ನಿ ಮುಂದೂಡಿಕೆಯಾಗಿತ್ತು. ಹೀಗಾಗಿ ಅದು ಮುಂದಿನ ವರ್ಷ ಭಾರತದಲ್ಲಿ ನಡೆಯಲಿದ್ದು, 2022ರಲ್ಲಿ ನಡೆಯುವ ಟಿ-20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ಆಯೋಜನೆ ಮಾಡಲು ಐಸಿಸಿ ಮುಂದಾಗಿವೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಇಂದು ಸಭೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಸದ್ಯ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಪ್ರಕಾರ, 2021ರ ಟಿ-20 ವಿಶ್ವಕಪ್ ಭಾರತದಲ್ಲೇ ನಡೆಯಲಿದ್ದು, 2022ರಲ್ಲಿ ಕಾಂಗಾರೂ ನಾಡು ಈ ಟೂರ್ನಿಗೆ ಆತಿಥ್ಯ ಸಿಗಲಿದೆ.