ಕಿಂಗ್ಸ್ಟನ್: ವೆಸ್ಟ್ ಇಂಡೀಸ್ ವಿರುದ್ಧ ನಡೆದ ಟೆಸ್ಟ್ ಚಾಂಪಿಯನ್ಶಿಪ್ನ ಮೊದಲ ಟೆಸ್ಟ್ ಪಂದ್ಯದಲ್ಲಿ 318ರನ್ಗಳ ಭರ್ಜರಿ ಜಯ ಸಾಧಿಸಿರುವ ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ವಿಶ್ವಾಸ ಹೊಂದಿದೆ.
ಇಂದಿನಿಂದ ಕಿಂಗ್ಸ್ಟನ್ನ ಸಬಿನಾ ಪಾರ್ಕ್ ಕ್ರೀಡಾಂಗಣದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು ಉಭಯ ತಂಗಳು ಕಠಿಣ ತಾಲೀಮು ನಡೆಸಿವೆ. ತವರಿನಲ್ಲಿ ಟೀಂ ಇಂಡಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಮುಗ್ಗರಿಸಿರುವ ಕೆರಿಬಿಯನ್ ಪಡೆ ಎರಡನೇ ಟೆಸ್ಟ್ಗೆ ಬಲಿಷ್ಟ ತಂಡವನ್ನ ಆಯ್ಕೆ ಮಾಡಿದೆ. ಆ ಮೂಲಕ ಹೇಗಾದರೂ ಮಾಡಿ ಸರಣಿ ಸಮಬಲ ಸಾಧಿಸುವ ಉದ್ದೇಶ ಹೊಂದಿದೆ.
ಇನ್ನು ಟೀಂ ಇಂಡಿಯಾ ಆಟಗಾರರು ಕೂಡ ನೆಟ್ನಲ್ಲಿ ಭರ್ಜರಿ ತಾಲೀಮು ನಡೆಸಿದ್ದಾರೆ. ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಆರಂಭಿಕ ಆಟಗಾಗರರಾದ ಮಯಾಂಕ್ ಅಗರ್ವಾಲ್ ಮತ್ತು ಕೆ ಎಲ್ ರಾಹುಲ್ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಆದರೂ ಎರಡನೇ ಪಂದ್ಯದಲ್ಲಿ ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಉತ್ತಮ ಪ್ರದರ್ಶನ ನೀಡುತ್ತಿದ್ದು, ಮೊದಲ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇನ್ನು ಹನುಮ ವಿಹಾರಿ ಕೂಡ ದ್ವಿತೀಯ ಇನ್ನಿಂಗ್ಸ್ನಲ್ಲಿ 93 ರನ್ ಗಳಿಸುವ ಮೂಲಕ ತಮ್ಮ ಆಯ್ಕೆಗೆ ನ್ಯಾಯ ಒದಗಿಸಿದ್ದರು. ಬೌಲಿಂಗ್ ವಿಭಾಗದಲ್ಲಿ ಇಶಾಂತ್ ಶರ್ಮಾ, ಜಸ್ಪ್ರಿತ್ ಬುಮ್ರಾ, ಮಹ್ಮದ್ ಶಮಿ, ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.
ಪಿಚ್ ಕಂಡೀಷನ್ ಉತ್ತಮವಾಗಿದೆ ಎಂದು ಕಾಣುತ್ತಿದೆ. ಮತ್ತೊಂದು ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಿದ್ದೇವೆ ಅಂತಾಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ.