ಸಿಡ್ನಿ: ಶುಕ್ರವಾರ ನಡೆಯಲಿರುವ ಏಕದಿನ ಪಂದ್ಯದ ಮೂಲಕ ಭಾರತ, ಆಸೀಸ್ ಸರಣಿ ಪ್ರಾರಂಭವಾಗಲಿದ್ದು, ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಯುವ ವೇಗಿ ಕಾರ್ತಿಕ್ ತ್ಯಾಗಿಗೆ ಬೌಲಿಂಗ್ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ.
ಸುದೀರ್ಘ ಪ್ರವಾಸದಿಂದಾಗಿ ಭಾರತೀಯ ಕ್ರಿಕೆಟ್ ತಂಡ ಆಸ್ಟ್ರೇಲಿಯಾಕ್ಕೆ ಆಗಮಿಸಿ 10 ದಿನಗಳಿಗಿಂತ ಹೆಚ್ಚು ಸಮಯವಾಗಿದ್ದು, ಏಕಕಾಲದಲ್ಲಿ ಬಿಳಿ ಮತ್ತು ಕೆಂಪು ಚೆಂಡಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಆಟಗಾರರು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಈ ಮಧ್ಯೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ, ತರಬೇತಿ ಅವಧಿಯ ಚಿತ್ರಗಳನ್ನು ಹಂಚಿಕೊಂಡಿದೆ. ಚಿತ್ರಗಳಲ್ಲಿ, ನೆಟ್ ಬೌಲರ್ ಆಗಿ ಟೀಂ ಇಂಡಿಯಾ ಆಟಗಾರರೊಂದಿಗೆ ಪ್ರಯಾಣಿಸಿರುವ ತ್ಯಾಗಿಗೆ ಬುಮ್ರಾ ಕೆಲವು ಅಮೂಲ್ಯವಾದ ಸಲಹೆ ನೀಡುತ್ತಿರುವುದನ್ನು ಕಾಣಬಹುದಾಗಿದೆ.
ಟೀಂ ಇಂಡಿಯಾ ಆಸ್ಟ್ರೇಲಿಯಾ ನೆಲದಲ್ಲಿ ಮೂರು ಏಕದಿನ, ಮೂರು ಟಿ -20 ಮತ್ತು ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಲಿದೆ.