ಹೈದರಾಬಾದ್: ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಇಂದು ಎರಡನೇ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿಂದು ಎರಡನೇ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದು ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲನೇ ಮ್ಯಾಚ್ ಗೆದ್ದಿರುವ ಆ್ಯರೋನ್ ಫಿಂಚ್ ಪಡೆ ಎರಡನೇ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ.
ಮೂರು ಪಂದ್ಯಗಳ ಏಕದಿನ ಸರಣಿ ಜೀವಂತವಾಗಿರಿಸಿಕೊಳ್ಳಬೇಕಾದರೆ ಭಾರತಕ್ಕೆ ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 374 ರನ್ ಗಳ ಬೃಹತ್ ಟಾರ್ಗೆಟ್ ನೀಡಿತ್ತು. ಈ ಟಾರ್ಗೆಟ್ ಬೆನ್ನತ್ತಿದ್ದ ಟೀಂ ಇಂಡಿಯಾ ಕೇವಲ 308 ರನ್ಗಳಿಸುವ ಮೂಲಕ 66 ರನ್ ಗಳ ಹಿನಾಯ ಸೋಲು ಅನುಭವಿಸಿತ್ತು. ಈ ಪಂದ್ಯದಲ್ಲಿ ಸ್ಟೀವನ್ ಸ್ಮಿತ್ ಮತ್ತು ನಾಯಕ ಆ್ಯರೋನ್ ಫಿಂಚ್ ತಲಾ ಶತಕ ಸಿಡಿಸಿ ಆತಿಥೇಯರ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.
ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಶ್ರೇಯಸ್ ಐಯ್ಯರ್, ಹಾರ್ದಿಕ್ ಪಾಂಡ್ಯ, ಕೆ.ಎಲ್.ರಾಹುಲ್( ವಿ.ಕೀ. ಮತ್ತು ಉ.ನಾಯಕ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್.
ಆಸ್ಟ್ರೇಲಿಯಾ ತಂಡ: ಆ್ಯರೋನ್ ಫಿಂಚ್(ನಾಯಕ), ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್(ಉಪನಾಯಕ), ಜೋಶ್ ಹೇಜಲ್‌ವುಡ್, ಮೊಯಿಸ್ ಹೆನ್ರಿಕೇಸ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್, ಆ್ಯಡಂ ಜಂಪಾ.