ಸಿಡ್ನಿ:ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಬ್ಯಾಟ್ಸ್ಮನ್ಗಳು ಉತ್ತಮ ಪ್ರದರ್ಶನ ತೋರುತ್ತಿದ್ದು, ಚಹಾ ವಿರಾಮದ ವೇಳೆಗೆ 1 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾಕ್ಕೆ ಸಿರಾಜ್ ಶಾಕ್ ನೀಡಿದ್ದು, ಡೇವಿಡ್ ವಾರ್ನರ್ ಕೇವಲ 5 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಮಳೆಯ ಕಾರಣ ಭೋಜನ ವಿರಾಮದವರೆಗೂ ಪಂದ್ಯ ಕೆಲಕಾಲ ಸ್ಥಗಿತಗೊಂಡಿತ್ತು.