ಬ್ರಿಸ್ಬೇನ್:ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದ ಮೊದಲ ಸೆಷನ್ ಮುಕ್ತಾಯಕ್ಕೆ ಆಸೀಸ್ನ ಆರಂಭಿಕ ಆಟಗಾರರಿಬ್ಬರೂ ಪೆವಿಲಿಯನ್ ಸೇರಿಕೊಂಡಿದ್ದು, ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಯಿತು. ಕಳೆದ ಪಂದ್ಯದಲ್ಲೂ ವಿಫಲರಾಗಿದ್ದ ಸ್ಫೋಟಕ ಆಟಗಾರ ಡೇವಿಡ್ ವಾರ್ನರ್ ಕೇವಲ ಒಂದು ರನ್ ಗಳಿಸಿ ಮೊದಲ ಓವರ್ನಲ್ಲೇ ಮೊಹಮ್ಮದ್ ಸಿರಾಜ್ಗೆ ವಿಕೆಟ್ ಒಪ್ಪಿಸಿದ್ರು.