ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗಾಯಗೊಂಡ ವಿಕೆಟ್ ಕೀಪರ್ ರಿಷಭ್ ಪಂತ್ 2ನೇ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ಸದ್ಯ ಕೀಪಿಂಗ್ ಜವಾಬ್ದಾರಿ ಕನ್ನಡಿಗ ಕೆ.ಎಲ್. ರಾಹುಲ್ ಹೆಗಲಿಗೆ ಬಿದ್ದಿದೆ. ಹಾಗಾಗಿ ಇದೀಗ ಹೆಚ್ಚುವರಿಯಾಗಿ ವಿಕೆಟ್ ಕೀಪಿಂಗ್ ಕೆಲಸ ನಿಭಾಯಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಯುವ ಆಟಗಾರನಿಗೆ ಬುಲಾವ್ ನೀಡಿದೆ.
ಟೀಂ ಇಂಡಿಯಾದ ಹೆಚ್ಚುವರಿ ವಿಕೆಟ್ ಕೀಪರ್ ಜವಾಬ್ದಾರಿ ಹೊತ್ತುಕೊಂಡಿದ್ದ ಸಂಜು ಸ್ಯಾಮ್ಸನ್ ಭಾರತ ಎ ತಂಡದೊಂದಿಗೆ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿದ್ದಾರೆ. ಈ ಕಾರಣ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಆಂಧ್ರಪ್ರದೇಶದ ಯುವ ಆಟಗಾರ ಕೆ.ಎಸ್.ಭರತ್ಗೆ ಬಿಸಿಸಿಐ ಬುಲಾವ್ ನೀಡಿದೆ.