ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದ ವೇಳೆ ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಗಾಯಗೊಂಡಿದ್ದು, ಅವರನ್ನು ಸ್ಕ್ಯಾನ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುವಾಗ ಎಡಗೈ ಹೆಬ್ಬೆರಳಿಗೆ ಪೆಟ್ಟು ಮಾಡಿಕೊಂಡಿದ್ದರು. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಜಡೇಜಾ ಅವರನ್ನು ಸ್ಕ್ಯಾನ್‌ಗಾಗಿ ಕರೆದೊಯ್ಯಲಾಗಿದೆ ಎಂದು ಹೇಳಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಪ್ರಮುಖ ನಾಲ್ಕು ವಿಕೆಟ್ ಪಡೆದಿದ್ದ ಜಡೇಜಾ, ಬ್ಯಾಟ್ ಮೂಲಕವೂ 28 ರನ್ಗಳ ಕೊಡುಗೆ ನೀಡಿದ್ದರು. ಅಲ್ಲದೇ ಫೀಲ್ಡಿಂಗ್ನಲ್ಲೂ ಕಮಾಲ್ ಮಾಡಿದ್ದ ಜಡ್ಡು, ಸ್ಮಿತ್ ಅವರನ್ನು ರನ್ಔಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಜಡೇಜಾ ಗಾಯಗೊಂಡಿರುವುದರಿಂದ ಭಾರತ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಂತಾಗಿದೆ.
ಓದಿಟೀಂ ಇಂಡಿಯಾಗೆ 'ಇಂಜುರಿ' ಕಾಟ; ರಿಷಭ್ ಪಂತ್ಗೆ ಗಾಯ.. ಸಹಾ ಹೆಗಲಿಗೆ ಕೀಪಿಂಗ್ ಜವಾಬ್ದಾರಿ
ಜಡೇಜಾಗೂ ಮೊದಲು ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ಗಾಯಗೊಂಡಿದ್ದರು. ಅವರನ್ನೂ ಕೂಡ ಸ್ಕ್ಯಾನ್‌ಗಾಗಿ ಕರೆದೊಯ್ಯಲಾಗಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.