ಕರ್ನಾಟಕ

karnataka

ETV Bharat / sports

ಟೀಂ ಇಂಡಿಯಾಗೆ 'ಇಂಜುರಿ' ಕಾಟ; ರಿಷಭ್ ಪಂತ್​ಗೆ ಗಾಯ.. ಸಹಾ ಹೆಗಲಿಗೆ ಕೀಪಿಂಗ್ ಜವಾಬ್ದಾರಿ - ರಿಷಭ್ ಪಂತ್​ಗೆ ಗಾಯ

ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದ ವೇಳೆ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಗಾಯಗೊಂಡಿದ್ದಾರೆ.

Rishabh Pant Hit on Elbow and Taken for Scan
ಬ್ಯಾಟಿಂಗ್ ವೇಳೆ ರಿಷಭ್ ಪಂತ್​ಗೆ ಗಾಯ

By

Published : Jan 9, 2021, 10:31 AM IST

ಸಿಡ್ನಿ: ಆಸೀಸ್ ವಿರುದ್ಧದ ಸರಣಿಯಲ್ಲಿ ಭಾರತ ತಂಡಕ್ಕೆ ಗಾಯದ ಸಮಸ್ಯೆ ಬಿಟ್ಟೂ ಬಿಡದೆ ಕಾಡುತ್ತಿದ್ದು, ಮೊದಲ ಇನ್ನಿಂಗ್ಸ್​​ನಲ್ಲಿ ಬ್ಯಾಟಿಂಗ್ ನಡೆಸುವಾಗ ವಿಕೆಟ್ ಕೀಪರ್ ರಿಷಭ್ ಪಂತ್ ಗಾಯಕ್ಕೆ ತುತ್ತಾಗಿದ್ದಾರೆ

ಪ್ಯಾಟ್ ಕಮ್ಮಿನ್ಸ್ ಎಸೆದ ಚೆಂಡು ಅವರ ಮೊಣಕೈಗೆ ತಗುಲಿತು, ಈ ವೇಳೆ ಮೈದಾನಕ್ಕೆ ಬಂದ ಫಿಸಿಯೋ ಚಿಕಿತ್ಸೆ ನೀಡಿದ ನಂತರ ಪಂತ್ ಮತ್ತೆ ಬ್ಯಾಟಿಂಗ್ ಮುಂದುವರೆಸಿದರು. ಆದ್ರೆ 36 ರನ್​ ಗಳಿಸಿರುವಾಗ ಹೆಜಲ್​ವುಡ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು.

ಪಂತ್ ಮೊಣಕೈಗೆ ಬಲವಾದ ಪೆಟ್ಟು ಬಿದ್ದಿದ್ದು, ಅವರನ್ನು ಸ್ಕ್ಯಾನ್​ಗಾಗಿ ಕರೆದೊಯ್ಯಲಾಗಿದೆ ಎಂದು ಬಿಸಿಸಿಐ ಮಾಹಿತಿ ನೀಡಿದ್ದು, ಅವರ ಬದಲು ವೃದ್ಧಿಮಾನ್ ಸಹಾ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ABOUT THE AUTHOR

...view details