ಅಹಮದಾಬಾದ್: ಪ್ರವಾಸಿ ಇಂಗ್ಲೆಂಡ್ ಹಾಗೂ ಟೀಂ ಇಂಡಿಯಾ ನಡುವೆ ಮೊದಲ ಟಿ-20 ಪಂದ್ಯ ಅರಂಭಗೊಂಡಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ತಂಡ ಕ್ಷೇತ್ರ ರಕ್ಷಣೆ ಆಯ್ದುಕೊಂಡಿದೆ. ಗುಜರಾತ್ನ ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಟಿ-20 ವಿಶ್ವಕಪ್ ದೃಷ್ಠಿಯಿಂದ ಈ ಟೂರ್ನಿ ಉಭಯ ತಂಡಗಳಿಗೆ ಮಹತ್ವ ಪಡೆದುಕೊಂಡಿದೆ.
ಪ್ರಮುಖವಾಗಿ ಹಿಟ್ಮ್ಯಾನ್ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಎಡಗೈ ಬ್ಯಾಟ್ಸಮನ್ ಶಿಖರ್ ಧವನ್ ಆರಂಭಿಕರಾಗಿ ರಾಹುಲ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
ಇಂಗ್ಲೆಂಡ್ ಆಡುವ 11ರ ಬಳಗ: ಜೇಸನ್ ರಾಯ್, ಜೋಸ್ ಬಟ್ಲರ್(ವಿ.ಕೀ), ಡೇವಿಡ್ ಮಲನ್, ಜಾನಿ ಬೈರ್ಸ್ಟೋವ್, ಇಯಾನ್ ಮಾರ್ಗನ್(ಕ್ಯಾಪ್ಟನ್), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಜೋಫ್ರಾ ಆರ್ಚರ್, ಕ್ರಿಸ್ ಜೋರ್ಡನ್, ಆದಿಲ್ ರಾಶೀದ್, ಮಾರ್ಕ್ ವುಡ್
ಇಂಡಿಯಾ ಆಡುವ 11ರ ಬಳಗ:ಕೆ.ಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ(ಕ್ಯಾಪ್ಟನ್), ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿ.ಕೀ) ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಹಾಲ್