ಅಹಮದಾಬಾದ್:ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದು, ಎದುರಾಳಿ ತಂಡಕ್ಕೆ 225 ರನ್ಗಳ ಬೃಹತ್ ಟಾರ್ಗೆಟ್ ನೀಡಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಉಪನಾಯಕ ರೋಹಿತ್ ಹಾಗೂ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ತಂಡದ ಮೇಲೆ ಸವಾರಿ ನಡೆಸಿದರು. ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ 34 ಎಸೆತಗಳಲ್ಲಿ 64 ರನ್ ಗಳಿಸಿದ್ರು. ಇದರಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್ ಸೇರಿಕೊಂಡಿದ್ದವು. ಹೀಗಾಗಿ ಮೊದಲ ವಿಕೆಟ್ಗೆ ಟೀಂ ಇಂಡಿಯಾ 94 ರನ್ಗಳ ಜೊತೆಯಾಟವಾಡಿತು.
64 ರನ್ ಗಳಿಸಿದ್ದ ವೇಳೆ ಸ್ಟೋಕ್ಸ್ ಬೌಲಿಂಗ್ನಲ್ಲಿ ವಿಕೆಟ್ ಒಪ್ಪಿಸಿ ರೋಹಿತ್ ಹೊರನಡೆದ್ರೆ, ವಿರಾಟ್ ಕೊಹ್ಲಿ ಸೇರಿಕೊಂಡ ಸೂರ್ಯಕುಮಾರ್ ಯಾದವ್ ಕೂಡ ಸ್ಫೋಟಕ ಆಟ ಪ್ರದರ್ಶಿಸಿದರು. ಕೇವಲ 17 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 3 ಬೌಂಡರಿಗಳ ಸಹಾಯದಿಂದ 32 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.