ಕರ್ನಾಟಕ

karnataka

ETV Bharat / sports

ಪ್ರೇಕ್ಷಕರಿಲ್ಲದೆ ಖಾಲಿ ಮೈದಾನದಲ್ಲಿ ಭಾರತ-ಇಂಗ್ಲೆಂಡ್ ಏಕದಿನ ಸರಣಿ ? - ಖಾಲಿ ಮೈದಾನದಲ್ಲಿ ಭಾರತ-ಇಂಗ್ಲೆಂಡ್ ಏಕದಿನ ಸರಣಿ

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣಕ್ಕಾಗಿ ಇದೀಗ ಭಾರತ-ಇಂಗ್ಲೆಂಡ್ ನಡುವಿನ ಏಕದಿನ ಕ್ರಿಕೆಟ್ ಸರಣಿ ಪ್ರೇಕ್ಷಕರಿಲ್ಲದ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂಬ ಮಾತು ಕೇಳಿ ಬರುತ್ತಿವೆ.

India vs England ODI Series
India vs England ODI Series

By

Published : Feb 27, 2021, 9:24 PM IST

ಹೈದರಾಬಾದ್​:ಇಂಗ್ಲೆಂಡ್​ ವಿರುದ್ಧ ನಡೆಯುತ್ತಿರುವ ಟೆಸ್ಟ್​ ಪಂದ್ಯಗಳ ವೀಕ್ಷಣೆ ಮಾಡಲು ಈಗಾಗಲೇ ಕ್ರೀಡಾಭಿಮಾನಿಗಳಿಗೆ ಅನುಮತಿ ನೀಡಲಾಗಿದೆ. ಆದರೆ ಇದರ ಬೆನ್ನಲ್ಲೇ ಇದೀಗ ಶಾಕಿಂಗ್​ ನ್ಯೂಸ್ ಒಂದು​ ಹೊರಬಿದ್ದಿದೆ.

ಆಂಗ್ಲರ ವಿರುದ್ಧ ಮಾರ್ಚ್​ 23, 26 ಹಾಗೂ 28ರಂದು ಮಹಾರಾಷ್ಟ್ರದ ಪುಣೆ ಕ್ರಿಕೆಟ್​ ಮೈದಾನದಲ್ಲಿ ನಡೆಯಲಿರುವ ಏಕದಿನ ಪಂದ್ಯಗಳನ್ನು ಪ್ರೇಕ್ಷಕರಿಲ್ಲದ ಖಾಲಿ ಮೈದಾನದಲ್ಲಿ ನಡೆಸಲು ಮುಂದಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ. ಆದರೆ ಇದರ ಬಗ್ಗೆ ಬಿಸಿಸಿಐ ಯಾವುದೇ ರೀತಿಯ ಅಧಿಕೃತ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: ಲಂಕಾ ವಿರುದ್ಧದ ಟಿ-20 ಸರಣಿಗೆ ವಿಡೀಸ್ ತಂಡ ಪ್ರಕಟ: ಗೇಲ್​, ಫಿಡರ್​ಗೆ ಅವಕಾಶ!

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಕಳೆದ ಕೆಲ ದಿನಗಳಿಂದ ಹೆಚ್ಚಾಗಿದ್ದು, ಕೆಲವೊಂದು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರ ಮಧ್ಯೆ ಪಂದ್ಯಗಳ ಸ್ಥಳಾಂತರದ ಬಗ್ಗೆ ಸಹ ಮಾತುಗಳು ಕೇಳಿ ಬರುತ್ತಿದ್ದು, ಪುಣೆಯಿಂದ ಮುಂಬೈಗೆ ಈ ಪಂದ್ಯ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ವರದಿಯಾಗಿದೆ.

ನಾಲ್ಕನೇ ಟೆಸ್ಟ್​ ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆ ಇಂಗ್ಲೆಂಡ್​ -ಭಾರತ ನಡುವೆ ಐದು ಟಿ-20 ಪಂದ್ಯಗಳ ಸರಣಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಾದ ಬಳಿಕ ಮೂರು ಏಕದಿನ ಪಂದ್ಯಗಳು ಪುಣೆಯಲ್ಲಿ ನಡೆಯಲಿವೆ. ಆದರೆ ಈ ಪಂದ್ಯಗಳನ್ನ ಮುಚ್ಚಿದ ಬಾಗಿಲು(Behind Closed Doors)ಗಳ ಹಿಂದೆ ನಡೆಸಲು ಮುಂದಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಂದು ವೇಳೆ ಈ ನಿರ್ಧಾರ ಕೈಗೊಂಡರೆ ಕ್ರೀಡಾಭಿಮಾನಿಗಳಿಗೆ ನಿರಾಶೆಯಾಗಲಿದೆ.

ABOUT THE AUTHOR

...view details