ವಿಶಾಖಪಟ್ಟಣ: ದಕ್ಷಿಣ ಆಫ್ರಿಕಾ ವಿರುದ್ಧದ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ..ಆರಂಭಿಕನಾಗಿ ರೋಹಿತ್! - ಟೀಂ ಇಂಡಿಯಾ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಟಾಸ್ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಮೂರು ಟೆಸ್ಟ್ ಪಂದ್ಯಗಳ ಮೊದಲ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯುತ್ತಿದ್ದು, ಕನ್ನಡಿಗ ಮಯಾಂಕ್ ಅಗರ್ವಾಲ್ ಮತ್ತು ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದ್ದಾರೆ.
ನಿನ್ನೆಯಷ್ಟೆ ಆಡುವ 11ರ ಬಳಗವನ್ನ ಬಿಸಿಸಿಐ ಪ್ರಕಟಣೆ ಮಾಡಿತ್ತು. ವೇಗಿ ಜಸ್ಪ್ರಿತ್ ಬೂಮ್ರಾ ಅನುಪಸ್ಥಿತಿಯಲ್ಲಿ ಇಶಾಂತ್ ಶರ್ಮಾ ಮತ್ತು ಮೊಹಮ್ಮದ್ ಶಮಿ ಬೌಲಿಂಗ್ ವಿಭಾಗವನ್ನ ಮುನ್ನಡೆಸಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ಆರ್. ಅಶ್ವಿನ್ ಮತ್ತು ರವೀಂದ್ರ ಜಡೇಜ ಸ್ಥಾನ ಪಡೆದುಕೊಂಡಿದ್ದಾರೆ. 11ರ ಬಳಗದಲ್ಲಿ ರಿಷಭ್ ಪಂತ್ ಬದಲು ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಸ್ಥಾನ ಪಡೆದುಕೊಂಡಿದ್ದಾರೆ.