ವಿಶಾಖಪಟ್ಟಣಂ:ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಆರಂಭಿಕ ದಿನ ಮಳೆಯಿಂದಾಗಿ ರದ್ದಾಗಿದ್ದು, ರೋಹಿತ್ ಶರ್ಮಾ ಆಕರ್ಷಕ ಶತಕ (115) ಹಾಗೂ ಕನ್ನಡಿಗ ಮಯಾಂಕ್ ಅಗರವಾಲ್ (84) ರನ್ ನೆರವಿನಿಂದ 59.1 ಓವರ್ಗಳಲ್ಲಿ 202ರನ್ಗಳಿಕೆ ಮಾಡಿದ್ದು, ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದೆ.
ಆಂಧ್ರಪ್ರದೇಶದ ವೈ ಎಸ್ ರಾಜಶೇಖರ್ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿತು. ಟೆಸ್ಟ್ ಕ್ರಿಕೆಟ್ನಲ್ಲೂ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 84 ಎಸೆತಗಳಲ್ಲಿ ಅರ್ಧಶತಕ ಹಾಗೂ 160 ಎಸೆತಗಳಲ್ಲಿ ಶತಕ ಪೂರೈಸಿದ್ದು 173 ಎಸೆತಗಳಲ್ಲಿ ಅಜೇಯ 115 ರನ್ ಗಳಿಸಿದ್ರು.ಇದು ರೋಹಿತ್ ಟೆಸ್ಟ್ ವೃತ್ತಿ ಜೀವನದ 4ನೇ ಟೆಸ್ಟ್ ಶತಕವಾಗಿದೆ.