ವಿಶಾಖಪಟ್ಟಣ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 11 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ರೋಹಿತ್ ಶರ್ಮಾ, ಆರ್ ಅಶ್ವಿನ್ ಹಾಗೂ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ತಂಡ ಸೇರ್ಪಡೆಗೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ಅಕ್ಟೋಬರ್ 2ರಿಂದ ವಿಶಾಖಪಟ್ಟಣದಲ್ಲಿ ಆರಂಭವಾಗಲಿದೆ. ಈ ಪಂದ್ಯಕ್ಕಾಗಿ ಬಿಸಿಸಿಐ 11 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ವಿಕೆಟ್ ಕೀಪರ್ ಸೇರಿಸಿ 7 ಬ್ಯಾಟ್ಸ್ಮನ್, ಇಬ್ಬರು ಸ್ಪಿನ್ ಹಾಗೂ ಇಬ್ಬರು ವೇಗಿಗಳನ್ನು ಆಯ್ಕೆ ಮಾಡಿದೆ.