ಹೈದರಾಬಾದ್:ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿದ್ದಾರೆ.
ಕಳೆದ ಆಗಸ್ಟ್ನಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದ ಟೀಂ ಇಂಡಿಯಾ ಮೂರೂ ಫಾರ್ಮೆಟ್ಗಳಲ್ಲೂ ಕೆರಿಬಿಯನ್ಸ್ ತಂಡದ ವಿರುದ್ಧ ಜಯ ಸಾಧಿಸಿತ್ತು. ಅಲ್ಲದೆ ಕಳೆದ ತಿಂಗಳು ನಡೆದ ಬಾಂಗ್ಲಾ ವಿರುದ್ಧದ ಟಿ-20 ಸರಣಿಯಲ್ಲೂ ಜಯ ಸಾಧಿಸಿರುವ ಟೀಂ ಇಂಡಿಯಾ ಕೆರಿಬಿಯನ್ನರನ್ನು ಸೋಲಿಸುವ ಹುಮ್ಮಸ್ಸಿನಲ್ಲಿದೆ.
ಬಾಂಗ್ಲಾ ವಿರುದ್ಧದ ಸರಣಿ ವೇಳೆ ವಿಶ್ರಾಂತಿ ಪಡೆದುಕೊಂಡಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ವಾಪಾಸ್ ಆಗಿದ್ದಾರೆ. ಆರಂಭಿಕನಾಗಿ ರೋಹಿತ್ ಶರ್ಮಾ ಜೊತೆ ಕನ್ನಡಿಗ ಕೆ.ಎಲ್.ರಾಹುಲ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
ಇತ್ತ ಬೌಲಿಂಗ್ ವಿಭಾಗದಲ್ಲೂ ಕೊಹ್ಲಿ ಪಡೆ ಬಲಿಷ್ಠವಾಗಿದೆ. ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಟೀಂ ಇಂಡಿಯಾದ ಬೌಲಿಂಗ್ ಶಕ್ತಿಯಾಗಿದ್ದಾರೆ. ಬಾಂಗ್ಲಾ ವಿರುದ್ಧ ಮಿಂಚಿದ್ದ ದೀಪಕ್ ಚಹಾರ್ ಮತ್ತು ಶಿವಂ ದುಬೆ ಕೂಡ ಉತ್ತಮ ಪ್ರದರ್ಶನ ನೀಡಬಲ್ಲರು. ಸ್ಪಿನ್ನಿಂಗ್ ವಿಭಾಗದಲ್ಲಿ ಯಜುವೇಂದ್ರ ಚಹಾಲ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಕೂಡ ಕೆರಿಬಿಯನ್ನರನ್ನ ಕಟ್ಟಿಹಾಕುವ ಶಕ್ತಿ ಹೊಂದಿದ್ದಾರೆ.