ಮುಂಬೈ:ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಎಂಬುದು ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಅದಕ್ಕೆ ಪುಷ್ಠಿ ನೀಡುವ ಹಾಗೇ ಮತ್ತಷ್ಟು ಪುರಾವೆ ಲಭ್ಯವಾಗುತ್ತಿವೆ.
ಕಳೆದ ಕೆಲ ವರ್ಷಗಳಿಂದ ಟೀಂ ಇಂಡಿಯಾದ ಟೆಸ್ಟ್ನಲ್ಲಿ ಅವಕಾಶ ಪಡೆದುಕೊಳ್ಳುವಲ್ಲಿ ವಿಫಲಗೊಂಡಿದ್ದ ರೋಹಿತ್ ಶರ್ಮಾ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗಾಗಿ ಚಾನ್ಸ್ ಗಿಟ್ಟಿಸಿಕೊಂಡಿದ್ದರು. ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ರೋಹಿತ್ ಬ್ಯಾಟಿಂಗ್ ವೈಖರಿಗೆ ಫಿದಾ ಆಗಿದ್ದ ಆಯ್ಕೆ ಸಮಿತಿ ಕೊನೆಗೂ ಅವರಿಗೆ ಟೆಸ್ಟ್ನಲ್ಲಿ ಆಡಲು ಅವಕಾಶ ನೀಡಿತ್ತು. ಆದರೆ ಇಂದಿನಿಂದ ಆರಂಭಗೊಂಡಿರುವ ಟೆಸ್ಟ್ನಲ್ಲಿ ಅವರಿಗೆ ಚಾನ್ಸ್ ನೀಡಿಲ್ಲ.