ಕಟಕ್:ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ, ರಾಹುಲ್, ರೋಹಿತ್ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 4 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿಯನ್ನ 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.
ವಿಂಡೀಸ್ ನೀಡಿದ 316 ರನ್ಗಳ ಗುರಿ ಬೆನ್ನತ್ತಿದ ಭಾರತಕ್ಕೆ ಉತ್ತಮ ಆರಂಭ ದೊರೆಯಿತು. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್.ರಾಹುಲ್ ಮೊದಲ ವಿಕೆಟ್ಗೆ 122 ರನ್ಗಳ ಕಾಣಿಕೆ ನೀಡಿದ್ರು. ಭರ್ಜರಿಯಾಗಿ ಬ್ಯಾಟ್ ಬೀಸಿದ ರೋಹಿತ್ ಶರ್ಮಾ ಅರ್ಧ ಶತಕ ಸಿಡಿಸಿದ್ರು. 63 ಗಳಿಸಿರುವಾಗ ಜಾಸನ್ ಹೋಲ್ಡರ್ ಬೌಲಿಂಗ್ನಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ರು.
ಏಕದಿನ ಕ್ರಿಕೆಟ್ನಲ್ಲಿ ಉತ್ತಮ ಫಾರ್ಮ್ ಕಂಡುಕೊಂಡಿರು ಕನ್ನಡಿಗ ಕೆ.ಎಲ್.ರಾಹುಲ್ ಕೂಡ ಅರ್ಧ ಶತಕ ಸಿಡಿಸಿದ್ರು. ಕೊಹ್ಲಿ ಜೊತೆಗೂಡಿ 2ನೇ ವಿಕೆಟ್ಗೆ 45ರನ್ಗಳ ಜೊತೆಯಾಟವಾಡಿ ಅಲ್ಜಾರಿ ಜೋಸೆಫ್ಗೆ ವಿಕೆಟ್ ಒಪ್ಪಿಸಿದ್ರು. ನಂತರ ಬಂದ ಶ್ರೇಯಸ್ ಐಯ್ಯರ್ 7 ರನ್ಗಳಿಸಿ ಔಟ್ ಆದ್ರೆ ರಿಷಭ್ ಪಂತ್ ಕೂಡ 7 ರನ್ಗಳಿಸಿ ವಿಕೆಟ್ ಒಪ್ಪಿಸಿದ್ರು.