ಹೈದರಾಬಾದ್: ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಮತ್ತೊಂದು ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10ಸಾವಿರ ರನ್ ಗಳಿಸಿದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಪ್ರಸ್ತುತ ಭಾರತ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಈ ಸರಣಿಯ ಮೂರನೇ ಪಂದ್ಯದಲ್ಲಿ ಮಿಥಾಲಿ ರಾಜ್ ಈ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮಿಥಾಲಿ ರಾಜ್ 36 ರನ್ಗಳಿಸಿ ಔಟಾದರು. ಇಂಗ್ಲೆಂಡ್‌ನ ಷಾರ್ಲೆಟ್ ಎಡ್ವರ್ಡ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ಮೈಲಿಗಲ್ಲು ತಲುಪಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಇಂಗ್ಲಿಷ್ ಮಹಿಳೆಯನ್ನ ಮೀರಿಸಲು ಮಿಥಾಲಿಗೆ ಇನ್ನೂ 299 ರನ್ಗಳ ಅವಶ್ಯಕತೆ ಇದೆ.