ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ಗೂ ಮುನ್ನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಭಾರತಕ್ಕೆ ಹಿಂತಿರುಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜನವರಿಯ ಮೊದಲ ವಾರದಲ್ಲಿ ಮಗುವಿಗೆ ಜನ್ಮ ನೀಡುವ ಸಾಧ್ಯತೆ ಹಿನ್ನೆಲೆ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಅಥವಾ ಮೂರು ಟೆಸ್ಟ್ಗಳನ್ನು ಆಡುವುದು ಅನುಮಾನ ಎಂದು ತಿಳಿದು ಬಂದಿದೆ.
ಜನವರಿ 7ರಿಂದ 11ರವರೆಗೆ ಸಿಡ್ನಿಯಲ್ಲಿ ಮತ್ತು ಬ್ರಿಸ್ಬೇನ್ನಲ್ಲಿ ಜನವರಿ 15ರಿಂದ 19ರವರೆಗೆ ಕೊನೆಯ 2 ಟೆಸ್ಟ್ಗಳು ನಡೆಯಲಿದ್ದು, ಕೊಹ್ಲಿ ಕೊನೆಯ 2 ಟೆಸ್ಟ್ಗಳಿಗೆ ಆಸ್ಟ್ರೇಲಿಯಾಕ್ಕೆ ಮರಳಲಿದ್ದಾರೆ. ಅವರಿಗೆ ಕ್ವಾರಂಟೈನ್ ಅವಧಿಯನ್ನು ಸಡಿಲಿಸುವಂತೆ ಬಿಸಿಸಿಐ ಕ್ರಿಕೆಟ್ ಆಸ್ಟ್ರೇಲಿಯಾ ಸಮಿತಿಗೆ ಮನವಿ ಮಾಡಲಿದೆ ಎಂದು ತಿಳಿದು ಬಂದಿದೆ.
ಮೊದಲ ಮಗುವಿನ ನಿರೀಕ್ಷೆಯಲ್ಲಿ ಕೊಹ್ಲಿ-ಅನುಷ್ಕಾ ಆದರೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರಯಾಣದಲ್ಲಿ ಜೀವ ಸುರಕ್ಷತೆ ವ್ಯವಸ್ಥೆ ಇಲ್ಲದಿರುವುದರಿಂದ ಕೊಹ್ಲಿ ಮತ್ತೆ ಆಸ್ಟ್ರೇಲಿಯಾಗೆ ಪ್ರಯಾಣಿಸುವ ಸಾಧ್ಯತೆ ಬಹಳ ಕಡಿಮೆ ಎನ್ನಲಾಗಿದೆ. ಹಾಗಾಗಿ ಕೊಹ್ಲಿ ಅನುಪಸ್ಥಿತಿಯಲ್ಲಿ ಕೊನೆಯ ಮೂರು ಟೆಸ್ಟ್ಗಳಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಬೇಕಾಗುತ್ತದೆ.
ನವೆಂಬರ್ 12ರಂದು ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ನವೆಂಬರ್ 27, 29 ಮತ್ತು ಡಿಸೆಂಬರ್ 2ರಂದು ಏಕದಿನ ಪಂದ್ಯ, ಡಿಸೆಂಬರ್ 4, 6 ಮತ್ತು 9ರಂದು ಟಿ-20 ಸರಣಿಯನ್ನಾಡಲಿದೆ. ಡಿಸೆಂಬರ್ 17ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.