ಮುಂಬೈ: ಇಬ್ಬರು ಕ್ರಿಕೆಟಿಗರು ಸೇರಿದಂತೆ ಒಟ್ಟು 13 ಮಂದಿಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಖಚಿತಪಡಿಸಿದೆ.
ಕೋವಿಡ್ 19 ದೃಢಪಟ್ಟಿರುವ ವಿಚಾರಗಳು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಬಿಸಿಸಿಐ ಈ ಕುರಿತು ಪ್ರಕಟಣೆ ಹೊರಡಿಸಿದೆ.

ಆಗಸ್ಟ್ 20ರಿಂದ 28ರವರೆಗೆ 1988 ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಇತ್ತೀಚಿನ ಪರೀಕ್ಷೆಯಲ್ಲಿ ಇಬ್ಬರು ಆಟಗಾರರು ಸೇರಿದಂತೆ ಒಟ್ಟು 13 ಮಂದಿಗೆ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಗಳು ಮತ್ತು ಅವರೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಐಸೊಲೇಟ್ ಮಾಡಲಾಗಿದೆ ಎಂದು ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.
ಡ್ರೀಮ್ 11 ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಸೀಸನ್‌ಗಾಗಿ ಆಡಳಿತ ಮಂಡಳಿ ಮತ್ತಷ್ಟು ಕಠಿಣ ಆರೋಗ್ಯ ಮತ್ತು ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಜಾರಿಗೆ ತಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ಕಿಂಗ್ಸ್ ಇಲೆವೆನ್ ಪಂಜಾಬ್, ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕ್ವಾರಂಟೈನ್ ಅವಧಿ ಮುಗಿಸಿ ಬಯೋ ಸೆಕ್ಯೂರ್ ವಲಯದಲ್ಲಿ ತರಬೇತಿ ಆರಂಭಿಸಿವೆ.