ಹೈದರಾಬಾದ್:ಇಲ್ಲಿನ ರಾಜೀವ್ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್-2019 ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ದುಕೊಂಡಿದೆ.
ಟಾಸ್ ಗೆದ್ದ ಮುಂಬೈ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟ್ ಮಾಡುವ ನಿರ್ಧಾರ ಕೈಗೊಂಡಿದ್ಧಾರೆ. ಈಗಾಗಲೇ ಎರಡೂ ತಂಡಗಳು ತಲಾ ಮೂರು ಬಾರಿ ಐಪಿಎಲ್ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿವೆ. 4ನೇ ಸಲ ಟ್ರೋಫಿ ಗೆದ್ದು ದಾಖಲೆ ಬರೆಯಲು ಎರಡೂ ತಂಡಗಳು ಪ್ರಬಲ ಪೈಪೋಟಿ ನಡೆಸಲಿವೆ.
ಎರಡೂ ತಂಡಗಳ ಆಡುವ 11ರ ಬಳಗ:
ಮುಂಬೈ ಇಂಡಿಯನ್ಸ್:ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿ.ಕೀ), ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಕೀರೋನ್ ಪೊಲಾರ್ಡ್, ರಾಹುಲ್ ಚಹರ್, ಮಿಚೆಲ್ ಮೆಕ್ಲೆನಾಘನ್, ಜಸ್ಪ್ರೀತ್ ಬುಮ್ರಾ, ಲಸಿತ್ ಮಾಲಿಂಗ
ಚೆನ್ನೈ ಸೂಪರ್ ಕಿಂಗ್ಸ್: : ಫಾಫ್ ಡುಪ್ಲೆಸಿಸ್, ಶೇನ್ ವ್ಯಾಟ್ಸನ್, ಸುರೇಶ್ ರೈನಾ, ಅಂಬಟಿ ರಾಯುಡು, ಎಂಎಸ್ ಧೋನಿ (ನಾಯಕ ಮತ್ತು ವಿ.ಕೀ), ಡ್ವೇನ್ ಬ್ರಾವೋ, ರವೀಂದ್ರ ಜಡೇಜ, ಹರ್ಭಜನ್ ಸಿಂಗ್, ದೀಪಕ್ ಚಹರ್, ಶಾರ್ದುಲ್ ಠಾಕೂರ್, ಇಮ್ರಾನ್ ತಾಹಿರ್